Advertisement

ಮಂಗಳೂರು: ಲಂಚ ಸ್ವೀಕಾರ; ಫಾರೆಸ್ಟ್ ಗಾರ್ಡ್ ಗೆ ಒಂದು ವರ್ಷ ಜೈಲು ಶಿಕ್ಷೆ

06:40 PM Nov 27, 2019 | Naveen |

ಮಂಗಳೂರು: ಮರದ ಕಟ್ಟಿಗೆ ಸಾಗಿಸುತ್ತಿದ್ದ ಟೆಂಪೋವನ್ನು ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಲು ವಾಹನದ ಮಾಲೀಕರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೆಸ್ಟ್ ಗಾರ್ಡ್ ಓರ್ವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಬುಧವಾರದಂದು ಶಿಕ್ಷೆ ಪ್ರಕಟಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 1 ವರ್ಷ ಸಾದಾ ಸಜೆ ಮತ್ತು 10,000/- ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆಯನ್ನು ವಿಧಿಸಿದೆ.

Advertisement

ಬಂಟ್ವಾಳ ತಾಲೂಕು ವೀರಕಂಬ ಫಾರೆಸ್ಟ್ ಗಾರ್ಡ್ ಆಗಿದ್ದ , ಪ್ರಸ್ತುತ ಬಂಟ್ವಾಳ ತಾಲೂಕು ವಗ್ಗ ದಲ್ಲಿ ಫಾರೆಸ್ಟ್ ಗಾರ್ಡ್ ಆಗಿರುವ ಮನೋಜ್ ಎಂಬುವವರು ಪ್ರಕರಣದ ಆರೋಪಿಯಾಗಿದ್ದಾರೆ. 2012 ಜುಲೈ 23 ರಂದು ಮರದ ಕಟ್ಟಿಗೆ ಸಾಗಿಸುತ್ತಿದ್ದ ಟೆಂಪೋ ವನ್ನು ಪ್ರಕರಣ ದಾಖಲಿಸದೆ ಬಿಡುಗಡೆ ಮಾಡಲು ವಾಹನದ ಮಾಲೀಕರಾದ ಬಂಟ್ವಾಳ ತಾಲೂಕು ಬಾರೆಬೆಟ್ಟು ನಿವಾಸಿ ಮೊಹಮ್ಮದ್ ಮುಸ್ತಾಫ ಎಂಬವರಿಂದ ರೂ 5,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ದಿಲೀಪ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದರು.

ಈ ಪ್ರಕರಣದ ಕುರಿತಂತೆ ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next