Advertisement
ಮಡಿಕೇರಿ ಸಮೀಪದ ಮಕ್ಕಂದೂರು ಗ್ರಾಮದ ಹೋಂ ಸ್ಟೇ ಒಂದರಲ್ಲಿ ಮಾದಕ ವಸ್ತು ಮಾರಾಟ ಮತ್ತು ಬಳಕೆ ಕುರಿತು ಲಭಿಸಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 414 ಗ್ರಾಂ ಗಾಂಜಾ ಮತ್ತು 9 ಸಂಖ್ಯೆಯ ನಿಷೇಧಿತ ಐಎಸ್‌ಡಿ ಮಾದಕ ವಸ್ತು ಸಹಿತ ಹಲವರನ್ನು ವಶಕ್ಕೆ ಪಡೆದರು.
ಕನ್ನಂಡಬಾಣೆ ರಸ್ತೆ ಜಂಕ್ಷನ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೈಸೂರು ಉದಯಗಿರಿ ನಿವಾಸಿ ಆಲಿಂ ಅಹಮದ್ (36), ಹಿಲ್ ರಸ್ತೆ ನಿವಾಸಿ ಎಂ.ಐ.ಮೊಹಿಸಿನ್ (45)ರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 728 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಮಹಿಳಾ ಸಮಾಜದ ಬಳಿ ನಿಷೇಧಿತ ಮಾದಕ ವಸ್ತು ಸೇವಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರ ನಿವಾಸಿಗಳಾದ ಎಂ.ಎ.ಸಾಗರ್ (22) ಮತ್ತು ಎಂ.ಎಸ್.ರೆಹಮಾನ್ (31) ಹಾಗೂ ಚೇತನ್ ಕೆ. (23) ರನ್ನು ಬಂಧಿಸಲಾಗಿದೆ.
Related Articles
Advertisement
ಗೋಣಿಕೊಪ್ಪ ಕಾವೇರಿ ಕಾಲೇಜು ರಸ್ತೆ ಮೂಲಕ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುತ್ತಿದ್ದ 3 ಮಂದಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಲಾಗಿದೆ ಅಲ್ಲಿನ ನಿವಾಸಿಗಳಾದ ಎಂ.ಎಂ. ಶಮೀರ್ (37), ಎಂ.ಜಬ್ಟಾರ್ (23) ಮತ್ತು ನಿಸಾರ್ (37) ರನ್ನು ಬಂಧಿಸಿ 370 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸ್ ಅಧಿಕಾರಿಗಳ ಹಾಗೂ ಸಿಬಂದಿಗಳ ಕಾರ್ಯದಕ್ಷತೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಪರವಾನಗಿ ರದ್ದುಜಿಲ್ಲೆ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸದ ನಿಮಿತ್ತ ತಂಗಲು ಬರುವ ಪ್ರವಾಸಿಗರು ಮಾದಕ ವಸ್ತು ಬಳಕೆ, ಮಾರಾಟ ಮಾಡುವುದು ಕಂಡು ಬಂದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳ ಮಾಲಕರು, ಮಧ್ಯವರ್ತಿಗಳು ಸ್ಥಳೀಯ ಠಾಣೆಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ದಾಳಿ ಸಂದರ್ಭ ಮಾದಕ ವಸ್ತು ಸೇವನೆ, ಮಾರಾಟ ಕಂಡು ಬಂದಲ್ಲಿ ಮಾಲಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅವುಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.