Advertisement

ಮಂಗಳೂರು: ಪ್ರೇಮಿಗಳ ದಿನಾಚರಣೆಗೆ ಬಜರಂಗದಳ ವಿರೋಧ

10:13 AM Feb 12, 2023 | Team Udayavani |

ಮಂಗಳೂರು: ಪ್ರೇಮಿಗಳ ದಿನಾಚರಣೆಗೆ ಬಜರಂಗ ದಳ ವಿರೋಧ ವ್ಯಕ್ತಪಡಿಸಿದ್ದು ಪ್ರೇಮಿಗಳ ದಿನಾಚರಣೆ ಪ್ರೇರೇಪಿಸುವ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿಯವರಿಗೆ ಮನವಿ ಮಾಡಿದೆ.

Advertisement

ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾದ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ ಅಲ್ಲದೆ ನಮ್ಮ ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವವಿದ್ದು ಶತಮಾನಗಳ ಇತಿಹಾಸವನ್ನು ಹೊಂದಿದೆ. ಆದಾಗಿಯೂ ಭಾರತೀಯ ಸಂಸ್ಕೃತಿಗೆ ಸಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ. ಯುವ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ. ನಮ್ಮ ಅಮೂಲ್ಯವಾದ ಸಂಸ್ಕೃತಿ ಆಚರಣೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನ ಹಾಗಾಗಿ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತದೆ ಮತ್ತು ಪ್ರೇಮಿಗಳ ದಿನಾಚರಣೆಗೆ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು ಇದನ್ನು ಬಜರಂಗದಳ ತೀವ್ರವಾಗಿ ವಿರೋಧಿಸುತ್ತದೆ ಎಂದಿದೆ.

ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಆದುದರಿಂದ ಪ್ರೇಮಿಗಳ ದಿನಾಚರಣೆ ಆಚರಿಸಬಾರದು. ಪ್ರೇಮಿಗಳ ದಿನಾಚರಣೆಯನ್ನು ಪ್ರೇರೇಪಿಸುವ ನಗರದ ಎಲ್ಲಾ ಹೂ ಅಂಗಡಿ ಮತ್ತು ಗಿಫ್ಟ್ ಸೆಂಟರ್ ಗಳು ಪ್ರೇಮಿಗಳ ದಿನಾಚರಣೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಮಾರಾಟ ಮಾಡಬಾರದು ಮತ್ತು ಈ ಆಚರಣೆಗೆ ಬೆಂಬಲ ಸೂಚಿಸಬಾರದು ಎಂದು ವಿನಂತಿಸುತ್ತೇವೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕರಾದ ನವೀನ್ ಮೂಡುಶೆಡ್ಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ರಾಜ್ಯಪಾಲ ಹುದ್ದೆ ತೊರೆದ ಭಗತ್ ಸಿಂಗ್ ಕೋಶ್ಯಾರಿ; ನೂತನ ಗವರ್ನರ್ ನೇಮಕ

ಹಿಂದೂ ಜನಜಾಗೃತಿ ಸಮಿತಿ ಪ್ರೇಮಿಗಳ ದಿನಾಚರಣೆಗೆ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಪೊಲೀಸರು ಕಾನೂನಿನಡಿ ಅವಕಾಶ ಮಾಡಿಕೊಡಲಾಗುವುದು. ಕಾನೂನು ವ್ಯಾಪ್ತಿ ಮೀರಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next