Advertisement
ಪುತ್ತೂರು ಎಪಿಎಂಸಿ ರಸ್ತೆಯ ರೈಲು ಮಾರ್ಗದಲ್ಲಿ ಅಂಡರ್‌ಪಾಸ್ ನಿರ್ಮಾಣದ ಬಗ್ಗೆ ರೈಲ್ವೇ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಣಿಯೂರು, ಎಡಮಂಗಲ ರೈಲು ನಿಲ್ದಾಣ ಮೇಲ್ದರ್ಜೆ, ಪುತ್ತೂರು ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿನ ರೈಲ್ವೇ ಸೇತುವೆ ವಿಸ್ತರಣೆ ಮೊದಲಾದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ರಸ್ತೆಯಲ್ಲಿ 23.6 ಕಿ.ಮೀ. ಉದ್ದದ ಮೆಗಾ ಸುರಂಗ ನಿರ್ಮಾಣಕ್ಕೆ 10 ಸಾವಿರ ಕೋ.ರೂ. ವೆಚ್ಚದಲ್ಲಿ ಡಿಪಿಆರ್ ತಯಾರಿಸಲಾಗಿದೆ. ಮಣ್ಣಿನ ಗುಣಮಟ್ಟ ಪರಿಶೀಲಿಸಲಾಗಿದ್ದು ಕೆಲವೆಡೆ ಮಣ್ಣು ಸಡಿಲಿಕೆ ಕಂಡು ಬಂದಿದೆ. ಹೀಗಾಗಿ ಕಾಮಗಾರಿ ವೆಚ್ಚ ಅಧಿಕವಾಗಲಿದೆ. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಫೆ. 28ರಂದು ಮಂಗಳೂರಿಗೆ ಬರಲಿದ್ದು ಕಾಮಗಾರಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ನಳಿನ್ ಹೇಳಿದರು.