Advertisement

ಮಂಗಳೂರು: ಬಿಜೆಪಿ ಪ್ರಗತಿ ರಥಕ್ಕೆ ಚಾಲನೆ

10:39 AM Feb 27, 2023 | Team Udayavani |

ಮಂಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ, ಗ್ರಾಮ, ಬೂತ್ ಮಟ್ಟಕ್ಕೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಪ್ರಗತಿ ರಥಕ್ಕೆ ಸೋಮವಾರ ಮಂಗಳೂರಿನ ಕದ್ರಿ‌ ಮೈದಾನದಲ್ಲಿ ಚಾಲನೆ ನೀಡಲಾಯಿತು.

Advertisement

ಒಟ್ಟು ಆರು ವಾಹನಗಳು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಪ್ರಗತಿ ರಥಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮತ್ತು ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.

ರಥ ಯಾತ್ರೆಯ ರಾಜ್ಯ ಸಹ ಪ್ರಭಾರಿ ಪ್ರೇಮಾನಂದ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ದಕ್ಷಿಣ ‌ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಸಾದ್ ಕುಮಾರ್, ಈಶ್ವರ ಕಟೀಲ್, ರಾಮದಾಸ್ ಬಂಟ್ವಾಳ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next