ಮಂಗಳೂರು: ಜಾನುವಾರುಗಳಲ್ಲಿ ಕಂಡುಬರುವ ಕಂದು ರೋಗ (ಬ್ರೂಸೆಲ್ಲೋಸಿಸ್)ವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಲಸಿಕೆ (ಬ್ರೂಸೆಲ್ಲಾ ವ್ಯಾಕ್ಸಿನ್) ಅಭಿಯಾನವನ್ನು ಮೇ 15ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದ್ದು,
Advertisement
ದ.ಕ.ದಲ್ಲಿ 5,234 ಮತ್ತು ಉಡುಪಿ ಜಿಲ್ಲೆಯಲ್ಲಿ 7,716 ಕರುಗಳಿಗೆ ಲಸಿಕೆ ಹಾಕಲಾಗಿದೆ.
ಬಾಕಿಯಾಗಿರುವ ಹಸುಗಳಿಗೆ ಮುಂದಿನ ಒಂದೆರಡು ದಿನಗಳಲ್ಲಿ ಆಯಾ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು. ದ.ಕ. ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಅತ್ಯಧಿಕ 1,480 ಕರುಗಳಿಗೆ ಲಸಿಕೆ ಹಾಕಲಾಗಿದೆ ಎಂದು ಪಶುಸಂಗೋಪನ ಇಲಾಖೆ ಉಪನಿರ್ದೇಶಕ ಡಾ| ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.