ಮಂಗಳೂರು: ನಗರದ ಅಂಬೇಡ್ಕರ್ ವೃತ್ತ (ಜ್ಯೋತಿ) ಸಮೀಪ ಸೋಮವಾರ ಬೆಳಗ್ಗೆ ಎರಡು ಖಾಸಗಿ ಬಸ್‌ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
Advertisement
ಹಂಪನಕಟ್ಟೆ ಕಡೆಯಿಂದ ಮೂಡುಶೆಡ್ಡೆ ಕಡೆಗೆ ಹೋಗುತ್ತಿದ್ದ ಬಸ್‌ಗೆ ಬಂಟ್ಸ್ ಹಾಸ್ಟೆಲ್ ಕಡೆಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆದುಕೊಂಡಿದೆ.
ಒಂದು ಬಸ್‌ನ ಮುಂಭಾಗ ಮತ್ತೊಂದು ಬಸ್ಸಿನ ಎಡಭಾಗ ಜಖಂಗೊಂಡಿದೆ. ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಸಂಚಾರ ಪೂರ್ವ ವಿಭಾಗದ ಪೊಲೀಸರು ತಿಳಿಸಿದ್ದಾರೆ.