Advertisement

ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ

11:29 AM Feb 27, 2021 | Team Udayavani |

ಮಂಗಳೂರು: ಪ್ರಕರಣವೊಂದರ ಆರೋಪಿಗಳಿಗೆ ಸೇರಿದ ಕಾರನ್ನು ಸಿಸಿಬಿ ಪೊಲೀಸರು (ನಗರ ಅಪರಾಧ ಪತ್ತೆದಳ) ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದ ತನಿಖೆಗಾಗಿ ಸಿಐಡಿ ತಂಡ ಮಂಗಳೂರಿಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

Advertisement

ಸಿಐಡಿ ಎಸ್‌ಪಿ ರೋಹಿಣಿ ಕಟ್ಟೋಚ್‌ ಅವರ ನೇತೃತ್ವದ ತಂಡ ತನಿಖೆ ಆರಂಭಿಸಿದ್ದು, ಸಿಐಡಿ ಡಿಜಿಗೆ ವರದಿ ಸಲ್ಲಿಸಲಿದೆ. ಅನಂತರ ಅದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸಲ್ಲಿಕೆಯಾಗಲಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿಗೆ ಈಗಾಗಲೆ ನೋಟಿಸ್‌ ನೀಡಲಾಗಿದೆ. ಪ್ರಾಥಮಿಕ ಹಂತದ ತನಿಖೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್‌ ಗಾಂವ್ಕರ್‌ ಅವರು ನಡೆಸಿದ್ದು, ಅದರ ವರದಿಯಲ್ಲಿ ಕಮಿಷನರ್‌ಗೆ ಸಲ್ಲಿಸಿದ್ದಾರೆ.

ನಾಲ್ವರ ಹೆಸರು ಉಲ್ಲೇಖ

ಪ್ರಾಥಮಿಕ ತನಿಖೆಯಲ್ಲಿ ಅಪರಾಧ ಪತ್ತೆದಳ ಹಿಂದಿನ ಎಸ್‌ಐ ಕಬ್ಬಳ್‌ರಾಜ್‌, ಸಿಸಿಬಿಯ ಆಶಿತ್‌, ರಾಜ ಹಾಗೂ ನಾರ್ಕೊಟಿಕ್‌ ಆ್ಯಂಡ್‌ ಎಕನಾಮಿಕ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅವರ ಹೆಸರು ಹಾಗೂ ಬ್ರೋಕರ್‌ ದಿವ್ಯದರ್ಶನ್‌ ಹೆಸರನ್ನು ಉಲ್ಲೇಖ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಣ ದ್ವಿಗುಣಗೊಳಿಸಿ ವ್ಯವಹಾರ ನಡೆಸುತ್ತಿದ್ದ ಎಲಿಯಾ ಸಂಸ್ಥೆ ನಡೆಸಿದ ವಂಚನೆ ಪ್ರಕರಣವನ್ನು ಕೂಡ ಸಿಐಡಿಗೆ ವಹಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next