ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳ ಸಂಪೂರ್ಣ ಬಂದ್ ನಂತರ ಮಂಗಳವಾರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಿದ್ದು, ಪರಿಣಾಮ ಕೇಂದ್ರ ಮಾರುಕಟ್ಟೆಯಲ್ಲಿ ಜನತೆ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದರು.
ಇಂದು ಅಗತ್ಯವಸ್ತು ಖರೀದಿಗೆ ಅವಕಾಶ ಹಿನ್ನಲೆಯಲ್ಲಿ ಬೆಳ್ಳಬೆಳಗ್ಗೆ ಮನೆಯಿಂದ ಭಾರೀ ಸಂಖ್ಯೆಯಲ್ಲಿ ಜನರು ಹೊರಬರುತ್ತಿದ್ದಾರೆ. ದಿನಸಿ, ತರಕಾರಿ ಅಂಗಡಿಗಳ ಮುಂದೆ ಜನರು ಸಾರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕಂಡುಬಂದಿದೆ.
ಮಂಗಳೂರಿನ ಕೇಂದ್ರ ಮಾರುಕಟ್ಟೆ, ಮಲ್ಲಿಕಟ್ಟೆ ಮಾರ್ಕೆಟ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ದಿನಸಿ ಸಾಮಗ್ರಿಗಳ, ಜೊತೆಗೆ ಮಾಂಸವನ್ನು ಖರೀದಿಸಲು ಮುಂದಾಗಿದ್ದರು. ಇದರಿಂದಾಗಿ ಭಾರೀ ಸಂಖ್ಯೆಯ ವಾಹನ ದಟ್ಟಣೆ ಮಂಗಳೂರು ನಗದರದೊಳಗೆ ಇಂದು ಬೆಳಗ್ಗ ಕಂಡುಬಂತು.
ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಅಗಿತ್ತು. ಇಂದು ಬೆಳ್ಳಗೆ 6 ರಿಂದ ಮಧ್ಯಾಹ್ನ 3 ತನಕ ಅಹಾರ ಸಾಮಗ್ರಿಗಳನ್ನು ಖರೀದಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದ್ದು ಪರಿಣಾಮ ಅಂಗಡಿಗಳ ಮುಂದೆ ಕ್ಯೂನಲ್ಲಿ ನಿಂತು ದಿನಸಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ.