Advertisement

ಮಹಿಳಾ ಮೀಸಲಾತಿಗಾಗಿ ನಾಳೆ ಮಂಗಳೂರು ಚಲೋ

12:30 AM Feb 25, 2019 | Team Udayavani |

ಬೆಂಗಳೂರು :  ಕೇಂದ್ರ ಸರ್ಕಾರ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಫೆ. 26ರಂದು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಅಪ್ಸರಾ ರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಯಾತ್ರೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಮಹಿಳೆಯರನ್ನೂ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ. ಕೇಂದ್ರದ ಮಹತ್ವಾಕಾಂಕ್ಷಿ ಬೇಟಿ ಬಚಾವೊ, ಬೇಟಿ ಪಡಾವೋ ವಿಫ‌ಲ ಯೋಜನೆಗಳಾಗಿವೆ. ಮಹಿಳೆಯರ ಸಬಲೀಕರಣ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.

Advertisement

ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಮಾತನಾಡಿ, ಮಹಿಳಾ ಮೀಸಲಾತಿ ಯಿಂದಲೇ ನಾನು ಉನ್ನತ ಹುದ್ದೆಗೇರಿದ್ದು, ಶೇ.33 ರಷ್ಟು ಅವಕಾಶ ಪಡೆಯುವುದು ಮಹಿಳೆಯರ ಹಕ್ಕು. ರಾಹುಲ್‌ ಗಾಂಧಿ ಮಹಿಳಾ ಮೀಸಲಾತಿಗೆ ಸಹಕಾರ ನೀಡಲು ಮುಂದಾಗಿದ್ದಾರೆ. ಬಿಜೆಪಿ ನಾಯಕರು ಏಕೆ ಮೀಸಲಾತಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next