ಮಂಗಳೂರು: ವೈರಲ್ ಜ್ವರದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ವರ್ಷದ ಬಾಲಕ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದು, ಬಾಲಕನ ಸಾವಿಗೆ ಡೆಂಗ್ಯೂ ಕಾರಣ ಎಂಬ ಶಂಕೆ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ಆದರೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.
ಹೃದಯದ ಮಾಂಸ ಖಂಡಗಳಲ್ಲಿ ವೈರಾಣು ಸೋಂಕು ಬಾಧಿಸಿ ಸಾವು ಸಂಭವಿಸಿದೆ, ಶಂಕಿತ ಡೆಂಗ್ಯೂ ಕಾರಣವಲ್ಲ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್ ಕುಮಾರ್ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆಯಲು ದ.ಕ. ಜಿಲ್ಲೆಯ ವಿವಿಧ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಚಿಕಿತ್ಸೆಗೆ ದಾಖಲಾಗಿರುವ ಎಲ್ಲ ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಾ| ನವೀನ್ ಕುಮಾರ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ಮನೆಗಳಿಗೆ ಈ ತಂಡ ಭೇಟಿ ನೀಡಲಿದೆ. 10ಕ್ಕೂ ಹೆಚ್ಚು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಹಕಾರದೊಂದಿಗೆ ಈ ತಂಡ ಕಾರ್ಯೋನ್ಮುಖವಾಗಲಿದೆ. ಸೊಳ್ಳೆ ಉತ್ಪತ್ತಿ ನಿರ್ಮೂಲನೆ, ಮನೆಗಳಲ್ಲಿ ಜ್ವರದ ಬಗ್ಗೆ ಮಾಹಿತಿ ನೀಡುವಿಕೆ ಸೇರಿದಂತೆ ವಿವಿಧ ಕೆಲಸಗಳನ್ನು ಈ ತಂಡಗಳು ಮಾಡಲಿವೆ.
Advertisement
100ಕ್ಕೂ ಹೆಚ್ಚು ಮಂದಿ ದಾಖಲು