Advertisement

‘ಹೆತ್ತವರಿಗೆ ಬಾಲ್ಯವಿವಾಹ ಬಾಧಕ ಜಾಗೃತಿ ಅಗತ್ಯ’

12:08 PM Oct 03, 2018 | |

ಕೊಡಿಯಾಲಬೈಲ್‌ : ಬಾಲ್ಯ ವಿವಾಹಕ್ಕೆ ಮುಂದಾಗುವ ಹೆತ್ತವರಿಗೆ ಅದರ ಬಾಧಕಗಳ ಕುರಿತು ಮನವರಿಕೆ ಮಾಡಿ ಕೊಡಬೇಕು. ಜಾಣ್ಮೆಯಿಂದ ಮನವೊಲಿಸುವ ಮೂಲಕ ಬಾಲ್ಯವಿವಾಹ ಕಾಯ್ದೆಯನ್ನು ಪರಿಣಾಮಕಾರಿಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಹೇಳಿದರು.

Advertisement

ನ್ಯಾಯಾಧೀಶರು, ಸರಕಾರಿ ಅಭಿಯೋಜಕರು ಹಾಗೂ ಬಾಲ್ಯ ವಿವಾಹ ನಿಷೇದಾಧಿಕಾರಿಗಳಿಗೆ ಮಂಗಳವಾರ ನ್ಯಾಯಾಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತರ ಜಿಲ್ಲೆಗಳಿಗೆ ಹೋಲಿಸಿದರೆ ದ.ಕ. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿರುವುದು ಕಡಿಮೆ. ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭ ಹಲವು ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದವು. ಇದರಿಂದ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಹೆತ್ತವರಿಗೆ ಜಾಗೃತಿ ಮೂಡಿಸುವುದರಿಂದಾಗಿ ಪ್ರಕರಣಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಅಭಿಯೋಜನ ಇಲಾಖೆಯ ಕಾನೂನು ಅಧಿಕಾರಿ ಶಿವಪ್ರಸಾದ್‌ ಆಳ್ವ ಮುಖ್ಯ ಅತಿಥಿಯಾಗಿದ್ದರು. ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ, ಅಭಿಯೋಜನಾ ಇಲಾಖೆಯ ವಸಂತ ಕುಮಾರ್‌ ಉಪಸ್ಥಿತರಿದ್ದರು.

ಸಿವಿಲ್‌ ನ್ಯಾಯಾಧೀಶ ಹರೀಶ್‌, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿ’ಸೋಜಾ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್‌ ವಂದಿಸಿದರು. ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ನ್ಯಾಯಾಂಗ, ಅಭಿಯೋಜನ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಜರಗಿತು.

ಕಾನೂನು ತಿಳಿವಳಿಕೆ ಅಗತ್ಯ
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸತ್ಯನಾರಾಯಣ ಆಚಾರ್ಯ ಮಾತನಾಡಿ, ಕಾನೂನಿನ ತಿಳುವಳಿಕೆ ನೀಡಿದರೆ ಬಾಲ್ಯವಿವಾಹ ಘಟಿಸದು. ಈ ನಿಟ್ಟಿನಲ್ಲಿ ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯೋನ್ಮುಖರಾಗಬೇಕು ಎಂದು ಅಭಿಪ್ರಾಯಪಟ್ಟರು.

Advertisement
Advertisement

Udayavani is now on Telegram. Click here to join our channel and stay updated with the latest news.

Next