Advertisement

Mangalore: ಕುಕ್ಕರ್‌ ಬಾಂಬ್‌ ಸ್ಫೋಟ- ಸದ್ಯದಲ್ಲೇ ಆರೋಪಪಟ್ಟಿ ಸಲ್ಲಿಕೆ

11:44 PM Nov 23, 2023 | Team Udayavani |

ಬೆಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಆರೋಪಿ ಶಾರಿಕ್‌ ಸಹಿತ ಐವರ ವಿರುದ್ಧ ಸದ್ಯದಲ್ಲೇ ಆರೋಪಪಟ್ಟಿ ಸಲ್ಲಿಸಲಿದ್ದಾರೆ.

Advertisement

ಪ್ರಕರಣ ಸಂಬಂಧ ಈಗಾಗಲೇ ಶಾರಿಕ್‌, ಮಾಜ್‌ ಮುನೀರ್‌, ಯಾಸೀನ್‌, ಅರಾಫ‌ತ್‌ ಸಹಿತ ಐವರನ್ನು ಬಂಧಿಸಲಾಗಿದೆ. ಜತೆಗೆ ಆರೋಪಿಗಳ ವಿರುದ್ಧ 50ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಸ್ಫೋಟಕ್ಕೆ ಎಲ್ಲೆಲ್ಲಿ ಸಂಚು ರೂಪಿಸಲಾಗಿತ್ತು? ತರಬೇತಿ ಎಲ್ಲಿ ನಡೆಸಲಾಗಿತ್ತು? ಕೃತ್ಯದಲ್ಲಿ ಯಾರೆಲ್ಲಭಾಗಿಯಾಗಿದ್ದರು? ಪ್ರಾಯೋಗಿಕ ತರಬೇತಿ ಪಡೆದು ಸ್ಫೋಟಿಸಿದ್ದ ಶಿವಮೊಗ್ಗದ ತುಂಗಾ ನದಿ ತೀರದ ಸ್ಥಳವನ್ನು ಆರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖವಾಗಿ ಶಂಕಿತರು ಕದ್ರಿ ದೇವಸ್ಥಾನ ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ ಕದ್ರಿ ದೇವಸ್ಥಾನ ಸ್ಫೋಟಕ್ಕೆ ಎಲ್ಲಿ ಯೋಜನೆ ರೂಪಿಸಲಾಗಿತ್ತು. ತರಬೇತಿ ಎಲ್ಲಿ ನಡೆಸಲಾಗಿತ್ತು, ಕದ್ರಿ ದೇವಸ್ಥಾನ ಸ್ಫೋಟದ ಬಳಿಕ ಉಡುಪಿ ಕೃಷ್ಣ ಮಠ, ಚಿಕ್ಕಮಗಳೂರು ಬಿಜೆಪಿ ಕಚೇರಿ ಸ್ಫೋಟ ಹೊಣೆಯೂ ಇದೇ ಶಾರಿಕ್‌ ವಹಿಸಿದ್ದ. ಜತೆಗೆ ಕೆಲವು ಮಠಗಳನ್ನು ಗುರಿಯಾಗಿಸಿಕೊಂಡಿದ್ದು, ಅವುಗಳ ಸ್ಫೋಟಕ್ಕೂ ಸಂಚು ರೂಪಿಸಿದ್ದ ಬಗ್ಗೆಯೂ ಉಲ್ಲೇಖೀಸಲಾಗಿದೆ. ಜತೆಗೆ, ಆರು ತಿಂಗಳ ಕಾಲ ನಿರಂತರವಾಗಿ ತರಬೇತಿ ಪಡೆದ ಬಗ್ಗೆಯೂ ಮಾಹಿತಿ ಇದರಲ್ಲಿದೆ. ವಿದೇಶಿ ಹ್ಯಾಂಡ್ಲರ್‌ಗಳ ಬಗ್ಗೆಯೂ ಸ್ಫೋಟಕ ವಿಚಾರಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಸ್ಫೋಟಕಗಳನ್ನು ಖರೀದಿಗೆ ವಿದೇಶದಿಂದ ಸಾಕಷ್ಟು ಹಣ ಬರುತ್ತಿತ್ತು. ಇದೇ ಹಣದಿಂದ ಆರೋಪಿಗಳು ಸ್ಫೋಟಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದರು. ಜತೆಗೆ ಇವರ ಖರ್ಚು ವೆಚ್ಚಗಳನ್ನು ಹ್ಯಾಂಡ್ಲರ್‌ಗಳೇ ನೋಡಿಕೊಳ್ಳುತ್ತಿದ್ದರು ಎಂಬುದು ಉಲ್ಲೇಖವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next