Advertisement
ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ ಉರ್ವಾಸ್ಟೋರ್ ನಿವಾಸಿ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಹಾಗೂ ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿದೆ.