Advertisement
ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾ ಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ತುಂಬಿಕೊಂಡರು.
Related Articles
ದಸರಾ ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರಾದ ಪರವಾಗಿ ಜನಾರ್ದನ ಪೂಜಾರಿ ಗೌರವಿಸಿದರು.
Advertisement
ಶಾಸಕ ಡಿ.ವೇದವ್ಯಾಸ ಕಾಮತ್, ವಿ.ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್ ಆರ್., ಪ್ರಮುಖರಾದ ಮಾಲತಿ ಜೆ.ಪೂಜಾರಿ, ಸಂತೋಷ್ ಕುಮಾರ್ ಜೆ., ರವಿಶಂಕರ ಮಿಜಾರ್, ಎಂ.ಶೇಖರ್ ಪೂಜಾರಿ, ಜಗದೀಪ್ ಡಿ.ಸುವರ್ಣ, ಹರಿಕೃಷ್ಣ ಬಂಟ್ವಾಳ್, ನವೀನ್‌ಚಂದ್ರ ಡಿ.ಸುವರ್ಣ, ಎ.ಸಿ.ಭಂಡಾರಿ, ಎಂ.ಶಶಿಧರ ಹೆಗ್ಡೆ ಸಹಿತ ಹಲವು ಗಣ್ಯರು, ಕ್ಷೇತ್ರಾಡಳಿತದ ಪ್ರಮುಖರು ಉಪಸ್ಥಿತರಿದ್ದರು.
ರಂಗು ತುಂಬಿದ ದಸರಾ ಶೋಭಾಯಾತ್ರೆಅಲಂಕೃತ ಕೊಡೆಗಳು, ಜಾನಪದ ಕಲಾ ತಂಡಗಳು, ಭಜನ ತಂಡ, ವಾದ್ಯ-ಬ್ಯಾಂಡ್ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳು ಶೋಭಾಯಾತ್ರೆಗೆ ಹೊಸ ರಂಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಹಲವು ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಶೋಭಾಯಾತ್ರೆಯ ಚೆಲುವು ಹೆಚ್ಚಿಸಿದವು. ವಿಶೇಷವಾಗಿ ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಿದವು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೋಗ ಮತ್ತು ನಾನಾ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆಯೇ ನೆರೆದಿತ್ತು. ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಳಿಸಿದವು. ಇದು ಜನರ ದಸರಾ
ಮಂಗಳೂರು ದಸರಾ ಜನರಿಂದಲೇ ಆಚರಿಸುವ ದಸರಾ. ಇದರ ಯಶಸ್ಸಿಗೆ ಕ್ಷೇತ್ರದಲ್ಲಿ ನೆಲೆಸಿರುವ ದೇವರು ಕಾರಣ. ಪ್ರತಿವರ್ಷ ಮಂಗಳೂರು ದಸರಾದ ವೈಭವವನ್ನು ಜಗತ್ತು ನೋಡುತ್ತದೆ. ದೇವರ ಕೃಪೆಯಿಂದ ಹೀಗೆ ವೈಭವದಿಂದ ಮುಂದುವರಿಯುತ್ತಿದೆ. ಈ ಬಾರಿ ಶಾರದೆಯ ವೀಣೆಯನ್ನು ಪುತ್ರ ಸಂತೋಷ್ ಅವರು ಬೆಳ್ಳಿಯಿಂದ ಮಾಡಿಸಿದ್ದಾರೆ. ಮುಂದಿನ ಬಾರಿ ದೇವರು ಅವಕಾಶ ನೀಡಿದರೆ ಚಿನ್ನದ ವೀಣೆಯನ್ನು ಪುತ್ರನ ಮೂಲಕ ಒದಗಿಸಲಾಗುವುದು.
ಜನಾರ್ದನ ಪೂಜಾರಿ , ದಸರಾ ರೂವಾರಿ