ಮಹಾನಗರ: ಮಂಗಳೂರು ದಸರಾ ಪ್ರಯುಕ್ತ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಪ್ರಥಮ ಬಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಿ ಕೊಡಲಾಗುತ್ತಿದ್ದು, ಶಾಸಕ ವೇದವ್ಯಾಸ ಕಾಮತ್, ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅದರ ಉದ್ಘಾಟನೆಯನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಮೈಸೂರು ದಸರಾ ಹಬ್ಬದಂತೆ ಮಂಗಳೂರು ದಸರಾ ಕೂಡ ಪ್ರಸಿದ್ಧಿ ಪಡೆಯುತ್ತಿದೆ. ಸಂಸದರಾದ ನಳಿನ್ ಕುಮಾರ್ ಕಟೀಲು ಅವರ ಮಾರ್ಗದರ್ಶನದಲ್ಲಿ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಸಹಕಾರದೊಂದಿಗೆ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ಜವಾಬ್ದಾರಿಯನ್ನು ಮನಪಾ ವಹಿಸಲಿದೆ. ಮಂಗಳೂರು ದಸರಾ ಹಬ್ಬವು ಇನ್ನಷ್ಟು ಪ್ರಸಿದ್ಧಿಯಾಗಬೇಕು ಎಂದರು.
ಇದನ್ನೂ ಓದಿ:ಮೋದಿಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ: ಪ್ರತಾಪ್ ಸಿಂಹ
ಮೇಯರ್ ಪ್ರೇಮಾನಂದ ಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಸ್ಥಾಯೀ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ., ಜಯಶ್ರೀ ಕುಡ್ವ, ಶೈಲೇಶ್ ಶೆಟ್ಟಿ ಅತ್ತಾವರ, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.