Advertisement
ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶವಿರುತ್ತದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ಇರುತ್ತದೆ.
Related Articles
ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧವಿರುತ್ತದೆ. ರಾತ್ರಿ 7 ರಿಂದ ಬೆ.7ರ ವರೆಗೆ ಎಲ್ಲಾ ರೀತಿಯ ಸಂಚಾರ,ಸೇವೆ ಬಂದ್ ಆಗಿರುತ್ತದೆ.
Advertisement
ಮದ್ಯ ಮಾರಾಟಕ್ಕೆ ದ.ಕ. ಜಿಲ್ಲಾಡಳಿತ ಷರತ್ತಿನ ಅನುಮತಿ ನೀಡಿದ್ದು, ದ.ಕ. ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ವೈನ್ ಶಾಪ್ ಗಳಲ್ಲಿ ಮೂವರು ಮಾತ್ರ ಸಿಬಂದಿ ಇರಬೇಕು. ಮದ್ಯ ಮಳಿಗೆಯ ಒಳಗೆ ಐವರು, ಹೊರಗೆ ಐವರು ಗ್ರಾಹಕರಿಗೆ ಅವಕಾಶ. ಅಂಗಡಿ ಮುಂಭಾಗದಲ್ಲಿ ಬ್ಯಾರಿಕೇಡ್ ಅಳವಡಿಸಿ, ಕಾವಲು ಹಾಕಬೇಕು. ಇಬ್ಬರು ಭದ್ರತಾ ಸಿಬಂದಿ ಅಳವಡಿಸಲು ಸೂಚನೆ ನೀಡಲಾಗಿದ್ದು, ಗ್ರಾಹಕರು, ಸಿಬಂದಿ ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕು. ಮದ್ಯದ ಅಂಗಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿರಬೇಕು ಎಂದು ಮದ್ಯದಂಗಡಿ ಮಾಲಕರಿಗೆ ದ.ಕ. ಜಿಲ್ಲಾಧಿಕಾರಿ ಷರತ್ತು ವಿಧಿಸಿದ್ದಾರೆ.