Advertisement

ಮಂಗಳೂರು: ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

12:01 PM Jan 19, 2020 | Naveen |

ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭವು ಭಾನುವಾರದಂದು ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ನಡೆಯಿತು.

Advertisement

ಕಾರ್ಯಕ್ರಮಕ್ಕೆ ಚಾಲನೆ ನೀಡಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಾತನಾಡುತ್ತಾ 1995-96ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಅಭಿಯಾನವು ಅದ್ಭುತವಾಗಿ ಸಾಧನೆ ಮಾಡಿದ್ದು, 1999 ರಲ್ಲಿ ದ.ಕ.ಜಿಲ್ಲೆಯಲ್ಲಿ ಕೊನೆಯ ಪ್ರಕರಣ ದಾಖಲಾಗಿತ್ತು. ಆ ಬಳಿಕ ಈವರೆಗೆ ಯಾವುದೇ ಪೋಲಿಯೋ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಪಂಚಾಯತ್ ಸಿ.ಇ.ಒ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್ ಸೇರಿದಂತೆ ವೆನ್ಲಾಕ್, ಲೇಡಿಗೋಶನ್ ಆಸ್ಪತ್ರೆಯ ವೈದ್ಯರು, ಸಿಬ್ಬಂಧಿಗಳು ಉಪಸ್ಥಿತರಿದ್ದರು.

ವಿದೇಶಿಗರಿಂದ ಪೋಲಿಯೋ ಜಾಗೃತಿ: ರೋಟರಿ ಕ್ಲಬ್ ವತಿಯಿಂದ ನಗರದ ವಿವಿಧ ಪೋಲಿಯೋ ಬೂತ್ ಗಳಲ್ಲಿ ಜರ್ಮನಿ, ಆಸ್ಟ್ರಿಯಾ ದೇಶದ ಒಟ್ಟು 6 ಮಂದಿ ರೋಟರಿ ಕಾರ್ಯಕರ್ತರು ಪಲ್ಸ್ ಪೋಲಿಯೋ ಜಾಗೃತಿ ಹಮ್ಮಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next