Advertisement
ಎಡಿಜಿಪಿ ಆಲೋಕ್ ಕುಮಾರ್ ಸ್ವತಃ ತನಿಖೆಯ ಉಸ್ತುವಾರಿ ವಹಿಸಿದ್ದು, ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಸುರತ್ಕಲ್, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Related Articles
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿಲ್ಲ. ಎಲ್ಲ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ. ಪ್ರವೀಣ್ ಹತ್ಯೆ ಹಿಂದೆ ಇರುವವರ ಬಗ್ಗೆ ವಿಚಾರಣೆ ಮುಂದುವರಿದಿದೆ. ಸಾರ್ವ ಜನಿಕರೂ ಸರಕಾರ, ಪೊಲೀಸರ ಮೇಲೆ ವಿಶ್ವಾಸವಿಟ್ಟು ಸಹಕರಿಸಬೇಕು ಎಂದು ವಿನಂತಿಸಿದರು.
Advertisement
ಪ್ರವೀಣ್ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಈಗಾಗಲೇ ಈ ನಿರ್ಧಾರಕ್ಕೆ ಬರಲಾಗದು ಎಂದರು.
ದ.ಕ.ದಲ್ಲಿ 8 ದಿನಗಳಲ್ಲಿ 3 ಹತ್ಯೆ ನಡೆದಿರುವುದರಿಂದ ಜಿಲ್ಲೆ ಮತ್ತೆ ಸುದ್ದಿಯಾಗಿದೆ. ಈ ಪ್ರಕರಣ ಪೊಲೀಸರಿಗೆ ಸವಾಲಾಗಿದೆ. ಆದರೆ ಅದನ್ನು ಭೇದಿಸಿ ಆರೋಪಿಗಳನ್ನು ಹಿಡಿಯುತ್ತೇವೆ. ನಗರ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿ ಸಿದ್ದು, ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದಾರೆ ಎಂದು ತಿಳಿಸಿದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಅನುÏ ಕುಮಾರ್, ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಶೀಘ್ರ ಬಂಧನ: ಎಡಿಜಿಪಿಸುರತ್ಕಲ್: ಫಾಝಿಲ್ ಹತ್ಯೆ ನಡೆದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಎಡಿಜಿಪಿ ಆಲೋಕ್ ಕುಮಾರ್, ಫಾಝಿಲ್ ಅಂತ್ಯಸಂಸ್ಕಾರ ಶಾಂತಿಯುತವಾಗಿ ನಡೆದಿದ್ದು, ಫಾಝಿಲ್ ಕುಟುಂಬದವರು ಸಂಪೂರ್ಣ ಸಹಕಾರ ನೀಡಿದ್ದಾರೆ. ಸಾರ್ವಜನಿಕರು, ಸಮುದಾಯದವರೂ ಸಹಕರಿಸಿದ್ದಾರೆ. ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಅಥವಾ ಬಂಧಿಸಲಾಗಿದೆ ಎಂಬ ಪ್ರಶ್ನೆಗೆ, ಸುರತ್ಕಲ್ ಕೊಲೆ ಪ್ರಕರಣದಲ್ಲಿ ವಾಹನ ಸಂಖ್ಯೆ, ಸಿಸಿ ಟಿವಿ ಆಧಾರದಲ್ಲಿ ಸಾಕ್ಷ್ಯ ಕಲೆ ಹಾಕುತ್ತಿದ್ದೇವೆ. ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವುದು ತನಿಖೆಯ ಭಾಗ. ಆದರೆ ಯಾರನ್ನೂ ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.