ಮಂಗಳೂರು: ನಗರದ ಕೆ.ಎಸ್.ರಾವ್ ರೋಡ್ ನ ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಹಣಕಾಸಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ವಿಜಯನಗರದ ನಿವಾಸಿಗಳಾದ 46 ವರ್ಷದ ದೇವೆಂದ್ರ ಅವರು ಪತ್ನಿ ಮತ್ತು ಒಂಭತ್ತು ವರ್ಷ ಪ್ರಾಯದ ಅವಳಿ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು ದೇವೇಂದ್ರ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
Related Articles
ಸ್ಥಳಕ್ಕೆ ಬಂದರು ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?