ಗೋಲಿಬಾರ್‌ಗೆ ಸಂಬಂಧಿಸಿದಂತೆ ನಗರದ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ, ಪಾಂಡೇಶ್ವರ ಠಾಣೆಯಲ್ಲಿ 13 ಪ್ರಕರಣಗಳು ದಾಖಲಾಗಿದ್ದವು. ಮುಖ್ಯ ಪ್ರಕರಣ ಸೇರಿದಂತೆ 3 ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ಇವುಗಳಲ್ಲಿ ಒಂದು ಪ್ರಕರಣದ ಚಾರ್ಜ್ ಶೀಟ್‌ನ್ನು ಸಿಐಡಿಯು ನ್ಯಾಯಾಲಯಕ್ಕೆ ಮಾರ್ಚ್ ತಿಂಗಳಲ್ಲೇ ಸಲ್ಲಿಸಿರುವುದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ 2 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆ ಬಾಕಿಯಿದೆ.
Advertisement
ಒಟ್ಟು 600ಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಇದಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿದ್ದ 13 ಪ್ರಕರಣಗಳ ಪೈಕಿ 3 ಪ್ರಕರಣಗಳ ಆರೋಪ ಪಟ್ಟಿಯನ್ನು 10 ದಿನಗಳ ಹಿಂದೆಯಷ್ಟೇ ಸಲ್ಲಿಸಲಾಗಿದೆ. ಆರೋಪ ಪಟ್ಟಿಯಲ್ಲಿ ಒಟ್ಟು 464 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ ಎಂದು ತಿಳಿದು ಬಂದಿದೆ. ಉಳಿದೆಲ್ಲ ಪ್ರಕರಣಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ.