Advertisement

ಮಂಗಳೂರು ಗೋಲಿಬಾರ್‌ ಪ್ರಕರಣ:ಮತ್ತೆ 16 ಮಂದಿ ಆರೋಪಿಗಳಿಗೆ ಜಾಮೀನು

09:29 AM Feb 28, 2020 | Team Udayavani |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 2019ರ ಡಿ.19ರಂದು ಮಂಗಳೂರು ಉತ್ತರ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಲು ಮತ್ತು ಪೊಲೀಸರನ್ನು ಕೊಲೆ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ 16 ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

Advertisement

ಪ್ರಕರಣ ಸಂಬಂಧ ಜಾಮೀನು ಕೋರಿ ಮೊಹಮ್ಮದ್‌ ಸುಹೇಲ್‌ ಮತ್ತು ನಾಸಿರುದ್ದೀನ್‌ ಸಹಿತ 16 ಮಂದಿ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಜಾನ್‌ ಮೈಕೆಲ್‌ ಕುನ್ಹಾ ಅವರ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳಲ್ಲಿ ಅರ್ಜಿದಾರರ ವಿರುದ್ಧದ ಆರೋಪಗಳನ್ನು ರುಜುವಾತು ಪಡಿಸುವ ನಿರ್ದಿಷ್ಟ ಸಾಕ್ಷ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್‌, ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಇದೇ ಪ್ರಕರಣದಲ್ಲಿ ಇತ್ತೀಚೆಗಷ್ಟೇ 21ಮಂದಿ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

ಆರೋಪಿಗಳು ತಲಾ ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಒದಗಿಸಬೇಕು ಹಾಗೂ ಅದೇ ಮೊತ್ತದ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಅಗತ್ಯವಿರುವಾಗೆಲ್ಲ ವಿಚಾರಣ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಸಾಕ್ಷಿಗಳನ್ನು ಬೆದರಿಸುವ ಅಥವಾ ಆಮಿಷಕ್ಕೊಳಪಡಿಸುವ ಕೆಲಸ ಮಾಡಬಾರದು. ಈ ಮಾದರಿಯ ಅಪರಾಧಗಳಲ್ಲಿ ಭಾಗಿಯಾಗಬಾರದು. ಪೂರ್ವಾನುಮತಿ ಇಲ್ಲದೇ ವಿಚಾರಣ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂಬ ಷರತ್ತುಗಳನ್ನು ಹೈಕೋರ್ಟ್‌ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next