Advertisement

ಮಂಗಳೂರು ಗೋಲಿಬಾರ್ ಪ್ರಕರಣ:ನ್ಯಾಯಾಂಗ ತನಿಖೆ ಆರಂಭ

02:28 PM Dec 30, 2019 | Team Udayavani |

ಮಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಯನ್ನು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಸೋಮವಾರ ಆರಂಭಿಸಿದರು.

Advertisement

ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರೊಂದಿಗೆ ಸಮಾಲೋಚಿಸಿದರು. ಬಳಿಕ ಸ್ಟೇಟ್ ಬ್ಯಾಂಕ್ ಪರಿಸರ, ಸಿಟಿ ಬಸ್ ನಿಲ್ದಾಣ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆಯ ಗೋಲಿಬಾರ್ ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರದ ಆದೇಶಿಸಿತ್ತು. ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ತನಿಖೆ ಹೊಣೆ ವಹಿಸಲಾಗಿದೆ. ಅವರನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಯನ್ನಾಗಿ ನೇಮಿಸಿ ಮೂರು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next