ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ.
ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.
ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ: ಯುವಕ ಸಾವು
ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಇಂತಹ ಕಿರುಕುಳಕ್ಕೊಳಗಾದರೆ ಮಹಿಳೆಯರು ಧೈರ್ಯದಿಂದ ದೂರು ನೀಡಿ ಎಂದಿದ್ದಾರೆ.