Advertisement

ಮಂಗಳೂರು: ಭಾರೀ ಮಳೆ ಸಾಧ್ಯತೆ; ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

09:57 AM Oct 25, 2019 | Team Udayavani |

ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.

Advertisement

ಈ ಸಮಯದಲ್ಲಿ 115.5 ಮಿ.ಮೀ ನಿಂದ 204.4 ಮೀ ಮೀವರೆಗೆ ಮಳೆ ಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಇಲಾಖೆಯು ಸೂಚನೆ ನೀಡಿದೆ.

ವಾಯುಭಾರ ಕುಸಿತದಿಂದಾಗಿ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲೂ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next