Advertisement
ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಮಹಾತ್ಮಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರಾಷ್ಟ್ರಧ್ವಜವನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರಿಗೆ ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ಆ ಮೂಲಕ ಮಂಗಳೂರಿನ ಪುರಭವನದಿಂದ ಪಾದಯಾತ್ರೆ ಆರಂಭಗೊಂಡು ಉರ್ವಾ ಕೆನರಾ ಪ್ರೌಢಶಾಲೆ ಬಳಿ ಕೊನೆಗೊಂಡಿತು.
ಪುರಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೂ ಇದೇ ಸಂದರ್ಭದಲ್ಲಿ ಮಾಲಾರ್ಪಣೆಗೈದು ಗೌರವ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಶಾಸಕರಾದ ಎಸ್. ಅಂಗಾರ, ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮೊದಲಾದವರು ಉಪಸ್ಥಿತರಿದ್ದರು.