Advertisement

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಇಬ್ಬರು ವಶ

10:04 AM Feb 18, 2020 | Naveen |

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಲಾಗಿದ್ದು, ಒಟ್ಟು 58.95 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಲಾಗಿದೆ.

Advertisement

ಮೊದಲ ಪ್ರಕರಣದಲ್ಲಿ ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇರಳದ ಮಲಪುರಂ ಚಪ್ಪತ್ತೋಡಿ ನಿವಾಸಿ ಮಹಮ್ಮದ್ ಸ್ವಲಿಹ್ (22) ಎಂಬಾತನನ್ನು ಬಂಧಿಸಲಾಗಿದೆ.ಈತ ಸುಮಾರು 32,35,820/- ಮೌಲ್ಯದ 797 ಗ್ರಾಂ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಮತ್ತೊಂದು ಪ್ರಕರಣದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆರುವನಶ್ಯೇರಿ ನಿವಾಸಿ ಮಹಮ್ಮದ್ ನಿಶಾದ್ (25) ಎಂಬಾತನನ್ನು ಬಂಧಿಸಲಾಗಿದೆ. ಈತ ಸುಮಾರು 26.59 ರೂಪಾಯಿ ಮೌಲ್ಯದ 655 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಗಳನ್ನು ಮಂಗಳೂರಿನ ಹೆಚ್ಚುವರಿ ಪ್ರದಾನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next