Advertisement
ಕರಾವಳಿಯಲ್ಲಿ ದೊಡ್ಡ ಮಟ್ಟದ ವ್ಯಾಪಾರ ಕೇಂದ್ರಗಳು, ಕೈಗಾರಿಕೆಗಳಿದ್ದು, ದೇಶದಲ್ಲಿ ಅತೀ ವೇಗವಾಗಿ ಬೆಳೆಯು ತ್ತಿರುವ ಜಿಲ್ಲೆಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿವೆ. ಬೆಂಗಳೂರಿನ ಅನಂತರ ಉದ್ಯಮ ಸ್ಥಾಪನೆಗೆ ಉತ್ತಮ ವಾತಾವರಣ ಈ ಜಿಲ್ಲೆಗಳು ಹೊಂದಿವೆ. ಜತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಸುಮಾರು 4 ಲಕ್ಷ ಮಂದಿ ತೆರಿಗೆದಾರರು ವಾರ್ಷಿಕ 3,300 ಕೋ.ರೂ. ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ತೆರಿಗೆ ಪಾವತಿಯಲ್ಲಿ ಮೊದಲ ಸ್ಥಾನ ಬೆಂಗಳೂರಿಗೆ, ದ್ವಿತೀಯ ಸ್ಥಾನ ಮಂಗಳೂರಿಗಿದ್ದರೆ, ಹುಬ್ಬಳ್ಳಿ ತೃತೀಯ ಸ್ಥಾನದಲ್ಲಿದೆ.
ಈಗಾಗಲೇ ರೈಲ್ವೇ ವಲಯ ಸೇರಿದಂತೆ ಹಲವು ಬೇಡಿಕೆ ಗಳ ಈಡೇರಿಕೆಗಾಗಿ ಕರಾವಳಿಗರು ಸರಕಾರಗಳ ಎದುರು ಆಗ್ರಹಿಸುತ್ತಲೇ ಇದ್ದಾರೆ. ಅವು ಈಡೇರುವ ಮೊದಲೇ, ಮತ್ತೂಂದು ಮಹತ್ವದ ಕಚೇರಿಯನ್ನು ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣ ವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕೇವಲ ಮೂರು (ಬೆಂಗಳೂರು, ಹುಬ್ಬಳ್ಳಿ, ಮಂಗಳೂರು) ಪಿಸಿಐಟಿ ಕಚೇರಿಗಳಿವೆ. ಈ ಸಂಖ್ಯೆಯೂ ಇತರ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ. ವಾಸ್ತವ ಹೀಗಿರುವಾಗ ಇರುವ ಒಂದು ಪ್ರಮುಖ ಕಚೇರಿಯನ್ನೂ ಬೇರೆ ರಾಜ್ಯದ ಕೇಂದ್ರದೊಂದಿಗೆ ವಿಲೀನಗೊಳಿಸುವುದು ಸರಿಯಲ್ಲ. ಇದರ ವಿರುದ್ಧ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು ಮತ್ತು ಕಚೇರಿಯನ್ನು ಶತಾಯಗತಾಯ ಉಳಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗತೊಡಗಿದೆ. ಒಂದೆಡೆ ಪ್ರೋತ್ಸಾಹ, ಮತ್ತೂಂದೆಡೆ ಸಮಸ್ಯೆ
ಕೈಗಾರಿಕೆಗಳ ಸಂಖ್ಯೆ ಹೆಚ್ಚಿ ಜನರಿಗೆ ಉದ್ಯೋಗ ದೊರಕಬೇಕು. ಅದಕ್ಕೆ ಪೂರಕ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಸರಕಾರ ಒಂದೆಡೆ ಒದ್ದಾಡುತ್ತಿದ್ದರೆ, ಮತ್ತೂಂದೆಡೆ ಇರುವ ಉದ್ಯಮಗಳಿಗೆ ಸಿಗುತ್ತಿದ್ದ ಹೊಸ ಹೊಸ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುವ
ಆಯುಕ್ತರ ಕಚೇರಿಯನ್ನು ವಿಲೀನಗೊಳಿಸಲಾಗುತ್ತಿದೆ. ಇದು ಸೂಕ್ತವಾದು ದಲ್ಲ. ಹೊಸ ಯೋಜನೆಯ ಕ್ಲಿಷ್ಟಕರ ವಿಷಯಗಳ ಮಾಹಿತಿಗೂ ಗೋವಾಕ್ಕೆ ಹೋಗಿಬರುವುದು ಎಷ್ಟು ಜನರಿಗೆ ಸಾಧ್ಯ ಎಂಬುದು ತೆರಿಗೆದಾರರ ವಲಯದ ಪ್ರಶ್ನೆ.
Related Articles
ತೆರಿಗೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಆನ್‌ಲೈನ್‌ನಲ್ಲಿ ಲಭ್ಯ ವಾಗುತ್ತಿರುವುದರಿಂದ ವಾರ್ಷಿಕ ರಿಟರ್ನ್ಸ್ ಫೈಲ್ ಮಾಡದವರಿಗೆ ನೋಟಿಸ್ ಹೆಚ್ಚುತ್ತಿದೆ. ಹಲವರು ಮಾಹಿತಿಯ ಕೊರತೆಯಿಂದ ರಿಟರ್ನ್ಸ್ಫೈ ಲ್ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮಂಗಳೂರಿನ ಪಿಸಿಐಟಿ ಕಚೇರಿ ಇಲ್ಲಿಯೇ ಇದ್ದರೆ ಪ್ರಕರಣಗಳ ತ್ವರಿತ ವಿಲೇವಾರಿ ಸಾಧ್ಯವಾಗುತ್ತದೆ ಎಂಬುದು ಲೆಕ್ಕ ಪರಿಶೋಧಕರ ಅಭಿಪ್ರಾಯ.
Advertisement
ಪ್ರಧಾನ ಆಯುಕ್ತರ ಕಚೇರಿ ಯಾಕೆ?ಪ್ರಮುಖ ತೆರಿಗೆಗಳು, ಕುಂದುಕೊರತೆ ಮತ್ತು ಅರ್ಜಿ ವಿಲೇವಾರಿಗಳಾದ 119, 220, 263, 264, ಬಡ್ಡಿ ಮನ್ನಾ, ಟಿಡಿಎಸ್ ವಿನಾಯಿತಿ ಪ್ರಮಾಣಪತ್ರ ಗಳಲ್ಲಿ ಪಿಸಿಐಟಿ ಕಚೇರಿ ಮುಖ್ಯ ಪಾತ್ರ ವಹಿಸುತ್ತದೆ. ಕರಾವಳಿಯಲ್ಲಿ ಸಹಕಾರಿ ಮತ್ತು ಶೆಡ್ನೂಲ್ಡ್ ಬ್ಯಾಂಕ್‌ಗಳು ಹೆಚ್ಚಿದ್ದು, ಮೌಲ್ಯಮಾಪನದಲ್ಲಿ ತೆರಿಗೆ ಆಕ್ಷೇಪ ಬಂದಾಗ ಪಿಸಿಐಟಿ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಬೃಹತ್ ಕೈಗಾರಿಕೆಗಳು, ಉನ್ನತ ಸಂಸ್ಥೆಗಳ ಕಚೇರಿಗಳು ಇಲ್ಲಿದ್ದು, ದೂರದ ಗೋವಾಕ್ಕೆ ಹೋಗುವುದು ಕಷ್ಟಸಾಧ್ಯ. ಅಷ್ಟಲ್ಲದೆ ಈ ಐಟಿ ಸಮಸ್ಯೆಗಳು ಒಂದೇ ಬಾರಿಗೆ ಪರಿಹಾರವಾಗವೆ. ಆಗಾಗ್ಗೆ ಹೋಗುವುದರಿಂದ ಸ್ಥಳೀಯ ತೆರಿಗೆದಾರರ ಸಮಯ ಮತ್ತು ಹಣ ಎರಡೂ ವ್ಯರ್ಥವಾಗಲಿವೆ. ಮಂಗಳೂರಿನ ಪಿಸಿಐಟಿ ಕಚೇರಿಯನ್ನು ಗೋವಾ ದೊಂದಿಗೆ ವಿಲೀನ ಮಾಡದೆ ಇರುವುದು ಉತ್ತಮ. ಅವಿಭಜಿತ ಜಿಲ್ಲೆಯಲ್ಲಿ 4 ಲಕ್ಷ ಜನರು ತೆರಿಗೆ ಪಾವ ತಿಸು ತ್ತಿದ್ದು, ಆಡಿಟ್ ಆಕ್ಷೇಪಗಳಿಗೆ ಗೋವಾಕ್ಕೆ ತೆರಳು ವುದು ಕಷ್ಟಸಾಧ್ಯ. ಈ ಕಚೇರಿ ಇಲ್ಲೇ ಉಳಿಯಬೇಕು.
– ಪ್ರದೀಪ್ ಜೋಗಿ, ಅಧ್ಯಕ್ಷರು, ಭಾರತೀಯ ಲೆಕ್ಕ ಪರಿಶೋಧಕರ ಸಂಘದ ಉಡುಪಿ ಶಾಖೆ ತೃಪ್ತಿ ಕುಮ್ರಗೋಡು