Advertisement

ಮಂಗಳೂರು: ಕನಕದಾಸ ಜಯಂತಿ ಆಚರಣೆ

07:36 PM Nov 15, 2019 | Naveen |

ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮವು ಕುದ್ಮುಲ್  ರಂಗರಾವ್ ಪುರಭವನದಲ್ಲಿ ಶುಕ್ರವಾರದಂದು ನಡೆಯಿತು.

Advertisement

ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸದ ನಳಿನ್‌ಕುಮಾರ್ ಕಟೀಲು ಮಾತನಾಡುತ್ತಾ ಸಾಮಾನ್ಯನಾಗಿ ಹುಟ್ಟಿ ಅಸಾಮಾನ್ಯನಾಗಿ ಬೆಳೆದ ಸಂತ ಕನಕದಾಸರು. ಭಕ್ತಿಮಾರ್ಗದಿಂದ ದೇವರನ್ನು ಒಲಿಸಿಕೊಂಡ ಕನಕದಾಸರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಭಕ್ತಿಮಾರ್ಗದಿಂದ ದೇವರನ್ನು ಕಾಣಲು ಸಾಧ್ಯ ಎಂದು ತೋರಿಸಿಕೊಟ್ಟ ಕನಕದಾಸರನ್ನು ನೆನೆಯುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.ಶಾಸಕ ಡಾ| ವೈ. ಭರತ್ ಶೆಟ್ಟಿ ಮಾತನಾಡಿ, ಕನಕದಾಸರ ಆದರ್ಶ, ತತ್ವ ಸಿದ್ಧಾಂತ, ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಅಂಕಣಕಾರ್ತಿ ಕವಿತಾ ಅಡ್ಡೂರು ವಿಶೇಷ ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ಕಸಾಪ ಜಿಲ್ಲಾಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ, ತಾಪಂ ಅಧ್ಯಕ್ಷ ಮೊಹಮ್ಮದ್ ಮೋನು ವಿಶೇಷ ಆಹ್ವಾನಿತರಾಗಿದ್ದರು. ಪಾಲಿಕೆ ಆಯುಕ್ತ ಅಜಿತ್‌ಕುಮಾರ್ ಹೆಗ್ಡೆ ಎಸ್., ಮಂಗಳೂರು ತಹಶೀಲ್ದಾರ್ ಟಿ. ಜಿ. ಗುರುಪ್ರಸಾದ್, ಕರಾವಳಿ ಕುರುಬರ ಸಂಘದ ಅಧ್ಯಕ್ಷ ಮಂಜು ನೋಟಗಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next