Advertisement
ಫೆ.06 ರಂದು ಮಂಗಳೂರು ನಗರಕ್ಕೆ ಒರಿಸ್ಸಾದಿಂದ ಬೊಲೆರೋದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ ನೇತೃತ್ವದ ತಂಡ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿದೆ.
Related Articles
Advertisement
ಆರೋಪಿಗಳಿಬ್ಬರೂ ಕೇರಳದ ರಾಜ್ಯದವರಾಗಿದ್ದು, ಕರ್ನಾಟಕ, ಕೇರಳ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾ ರಾಜ್ಯದಿಂದ ಗಾಂಜಾವನ್ನು ಖರೀದಿಸಿ ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಗಾಂಜಾವನ್ನು ಕಳ್ಳ ಸಾಗಾಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೋಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ನ್ನು ಮಾಡಿ ಈ ಬಾಕ್ಸ್ ನಲ್ಲಿ ಗಾಂಜಾವನ್ನು ಬಚ್ಚಿಟ್ಟಿದ್ದರು.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಸದ್ಯ ಬಂಧಿಸಲ್ಪಟ್ಟಿರುವ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದೆ.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.