Advertisement
ಇವುಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಬಿಜೆಪಿ ಮತ್ತು ಒಂದು ಬಾರಿ ಕಾಂಗ್ರೆಸ್ ಜಯ ಗಳಿಸಿದೆ. 2008ರಲ್ಲಿ ಬಿಜೆಪಿ ಎನ್. ಯೋಗೀಶ್ ಭಟ್, 2013ರಲ್ಲಿ ಕಾಂಗ್ರೆಸ್‌ನ ಜೆ.ಆರ್. ಲೋಬೋ ಮತ್ತು 2018ರಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೈಹಿಡಿದರೂ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ದೊರಕಿಸಿ ಕೊಟ್ಟಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರ ಮತ್ತೆ ಕಾಂಗ್ರೆಸ್ ಕೈಜಾರಿ ಬಿಜೆಪಿ ಪಾಲಾಗಿತ್ತು.
2008ರ ವಿಧಾನಸಭಾ ಚುನಾವಣೆಯಲ್ಲಿ ಆಗ ಶಾಸಕರಾಗಿದ್ದ ಎನ್. ಯೋಗೀಶ್ ಭಟ್ ಅವರು (60,133)ಕಾಂಗ್ರೆಸ್‌ನ ಐವನ್ ಡಿ’ಸೋಜಾ (51,373) ವಿರುದ್ಧ 8,760 ಮತಗಳಿಂದ ಗೆಲವು ಸಾಧಿಸಿದ್ದರು. ಆ ಬಳಿಕ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ಜನಾರ್ದನ ಪೂಜಾರಿಯವರು ಬಿಜೆಪಿಯ ನಳಿನ್ ಕುಮಾರ್ ಕಟೀಲು ವಿರುದ್ಧ ಸೋಲು ಅನುಭವಿಸಿದ್ದರೂ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 4,582 ಮತ ಮುನ್ನಡೆ ಸಾಧಿಸಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಕಳೆದ ನಾಲ್ಕು ಅವಧಿಗಳಲ್ಲಿ ನಿರಂತರ ಜಯ ಸಾಧಿಸುತ್ತಾ ಬಂದಿದ್ದ ಬಿಜೆಪಿ ಇಲ್ಲಿ ಸೋಲು ಅನುಭವಿಸಿತು. ಕಾಂಗ್ರೆಸ್‌ನ ಜೆ.ಆರ್. ಲೋಬೋ (67,829) ಬಿಜೆಪಿಯ ಎನ್. ಯೋಗೀಶ್ ಭಟ್ (55,554) ವಿರುದ್ಧ 12,275 ಮತಗಳ ಅಂತರದಿಂದ ಜಯ ಗಳಿಸಿದ್ದರು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಇಲ್ಲಿ ಬಿಜೆಪಿಯ ನಳಿನ್ (79,150) ಕಾಂಗ್ರೆಸ್‌ನ ಜನಾರ್ದನ ಪೂಜಾರಿ (66,070) ವಿರುದ್ಧ 13,086 ಮತಗಳ ಮುನ್ನಡೆ ಸಾಧಿಸಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳ ಮುನ್ನಡೆ ಹೆಚ್ಚಿಸಿಕೊಂಡಿತ್ತು. ಬಿಜೆಪಿಯ ವೇದವ್ಯಾಸ ಕಾಮತ್ (86,545) ಕಾಂಗ್ರೆಸ್‌ನ ಜೆ.ಆರ್. ಲೋಬೋ (70,470) ವಿರುದ್ಧ 16,075 ಮತಗಳ ಜಯ ಗಳಿಸಿದ್ದರು. ಈ ಗೆಲುವು ಬಿಜೆಪಿಯ ಆತ್ಮವಿಶ್ವಾಸವನ್ನು ಇನ್ನಷ್ಟು ವೃದ್ಧಿಸಿದೆ ಇದೇ ವೇಳೆ ಕಾಂಗ್ರೆಸ್ ಕೂಡ ಕಾರ್ಯತಂತ್ರಗಳನ್ನು ರೂಪಿಸತೊಡಗಿದೆ. ಹ್ಯಾಟ್ರಿಕ್ ಸಾಧನೆಗೆ ಮುನ್ನಡೆಯ ಗುರಿ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಜಯದ ಗುರಿಯನ್ನು ಹೊಂದಿರುವ ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರಿಗೆ ಕ್ಷೇತ್ರದಲ್ಲಿ ಕನಿಷ್ಠ 20,000 ಮುನ್ನಡೆಯನ್ನು ದೊರಕಿಸಿಕೊಡುವ ಗುರಿಯಿಟ್ಟು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಯೊìನ್ಮುಖರಾಗಿದ್ದಾರೆ. ಬಿಜೆಪಿ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಧಾನವಾಗಿ ಪ್ರಸ್ತಾವವಾಗುತ್ತಿದ್ದಾರೆ. ಮೋದಿಯವರು ಮತ್ತೂಮ್ಮೆ ಪ್ರಧಾನಿಯಾಗಲು ಬಿಜೆಪಿಗೆ ಮತ ಎಂಬುದು ಬಿಜೆಪಿ ಪ್ರಚಾರದಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಘೋಷವಾಕ್ಯ.
Related Articles
ಕಾಂಗ್ರೆಸ್ ನಾಲ್ಕು ದಶಕಗಳ ಬಳಿಕ ಈ ಬಾರಿ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖ ಮಾತ್ರವಲ್ಲದೆ ಯುವ ಅಭ್ಯರ್ಥಿ ಮಿಥುನ್ ರೈ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಯುವ ಮತದಾರರನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಸಾಧಿಸಿದ್ದ 12,275 ಮತಗಳ ಮುನ್ನಡೆಯನ್ನು ಮರಳಿ ಗಳಿಸುವ ಪ್ರಯತ್ನಗಳು ಸಾಗಿವೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯ ಕಾಂಗ್ರೆಸ್ ನಾಯಕರಿಂದ ನಡೆಯುತ್ತಿದೆ.
Advertisement
- ಕೇಶವ ಕುಂದರ್