Advertisement
ದ.ಕ. ಕೃಷಿ, ತೋಟಗಾರಿಕೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಕೃಷಿಕರ ಸಮಸ್ಯೆ, ಸವಾಲುಗಳ ಬಗ್ಗೆ ಅಧಿಕಾರಿಗಳ ಜತೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಿ ಅವರು ಮಾತನಾಡಿದರು.
Related Articles
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡ ಬೇಕು. ಕೆಲವು ಯೋಜನೆಗಳು ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ಸಿಗುತ್ತಿದೆ. ಇದಕ್ಕೆ ಕಡಿವಾಣ ಅಗತ್ಯ ಎಂದರು. ಶಾಸಕರಾದ ಡಾ| ಭರತ್ ಶೆಟ್ಟಿ ವೈ., ಹರೀಶ್ ಪೂಂಜ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಡಿಸಿ ಸಿಂಧೂ ಬಿ. ರೂಪೇಶ್, ಸಿಇಒ ಡಾ| ಸೆಲ್ವಮಣಿ, ಕೃಷಿ ಜಂಟಿ ನಿರ್ದೇಶಕಿ ಸೀತಾ ಉಪಸ್ಥಿತರಿದ್ದರು.
Advertisement
ಬರಡು ಭೂಮಿಯ ಬಗ್ಗೆ ಸರ್ವೆಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಜಿಲ್ಲೆ ಯಲ್ಲಿ ಕೃಷಿ, ಬರಡು ಭೂಮಿ ಎಷ್ಟಿದೆ ಎಂಬ ಬಗ್ಗೆ ಸಂಪೂರ್ಣ ಸರ್ವೆ ನಡೆಸಬೇಕು. ಯಂತ್ರೋಪಕರಣಗಳು ರೈತರಿಗೆ ಸಮರ್ಪಕವಾಗಿ ಸಿಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರೈತರಿಗೆ ಮೈಲುತುತ್ತು, ಸುಣ್ಣ ನಿಗದಿತ ದರ ದಲ್ಲಿ ಸಿಗುತ್ತಿದೆಯೇ ಎಂಬ ಬಗ್ಗೆ ಇಲಾಖೆ ಪರಿಶೀಲಿಸ ಬೇಕು ಎಂದರು. ತಾಲೂಕಿಗೊಂದು
ಕೋಲ್ಡ್ ಸ್ಟೋರೇಜ್
ಲಾಕ್‌ಡೌನ್ ಅವಧಿಯಲ್ಲಿ ಕೃಷಿ ಪೂರಕ ಚಟುವಟಿಕೆಗಳನ್ನು ನಡೆಸಲು, ಸಾಗಾಟಕ್ಕೆ ಯಾವುದೇ ಸಮಸ್ಯೆ ಆಗಬಾರದು. ಈ ಬಗ್ಗೆ ಜಿಲ್ಲಾಡಳಿತ ನೋಡಿಕೊಳ್ಳಬೇಕು. ರಾಜ್ಯದಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ. ದ.ಕ. ಜಿಲ್ಲೆಯಲ್ಲಿ ಕೃಷಿ ಯಂತ್ರಗಳು ಸಮರ್ಪಕವಾಗಿ ರೈತರಿಗೆ ಸಿಗುತ್ತಿಲ್ಲ ಎಂಬ ಅಪವಾದವಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ವಿಶೇಷ ನಿಗಾ ವಹಿಸ ಬೇಕು. ಯಂತ್ರಧಾರೆ ಯೋಜನೆ ಎಲ್ಲ ರೈತರಿಗೂ ಸಿಗಬೇಕಿದೆ. ಪ್ರತೀ ತಾಲೂಕಿಗೆ ಒಂದು ಕೋಲ್ಡ್ ಸ್ಟೋರೇಜ್ ಆರಂಭಿಸುವ ಬಗ್ಗೆ ಚಿಂತನೆಯಿದೆ ಎಂದು ಬಿ.ಸಿ. ಪಾಟೀಲ್ ಹೇಳಿದರು.