Advertisement

ಮಂಗಳೂರು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಚೇರಿ ಉದ್ಘಾಟನೆ

01:22 PM Oct 06, 2019 | Naveen |

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ನೂತನ ಕಚೇರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರದಂದು ಉದ್ಘಾಟನೆಗೊಂಡಿತು.

Advertisement

ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ದ.ಕ ಲೋಕಸಭಾ ಸದಸ್ಯ ನಳೀನ್ ಕುಮಾರ್ ಕಟೀಲು ಅವರು  ಕೋಟಾರವರು ಹಲವಾರು ವರ್ಷಗಳ ಅನುಭವಿ ರಾಜಕಾರಣಿಯಾಗಿದ್ದು, ಅವರಿಂದ ಜಿಲ್ಲೆಯು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದು ಹೇಳಿದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಮಾತನಾಡಿ ಪ್ರತಿ ಸೋಮವಾರದಂದು ದಿನವಿಡಿ ತಾನು ಈ ಕಚೇರಿಯಲ್ಲಿ ಲಭ್ಯವಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜೆ.ಕೃಷ್ಣ ಪಾಲೇಮಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next