Advertisement

ಮಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ: ಸಚಿವ ಶ್ರೀರಾಮುಲು

08:02 PM Feb 06, 2020 | Naveen |

ಮಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿಲ್ಲ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿಡಲಾಗಿದೆ. ವಾಹನಗಳಲ್ಲಿ ಎಲ್‌ಇಡಿ ಬ್ಯಾನರ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ಗುರುವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇಡೀ ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ಭಯ ಸೃಷ್ಟಿ ಮಾಡಿದೆ. ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಬಂದರು, ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುತ್ತಿದ್ದೇವೆ ಎಂದರು.

ಸಚಿವ ಸಂಪುಟ ವಿಸ್ತರಣೆಯ ಕುರಿತು ಅವರು ಮಾತನಾಡುತ್ತಾ ಸದ್ಯಕ್ಕೆ 3 ಮಂದಿ ಉಪಮುಖ್ಯಮಂತ್ರಿ ಇದ್ದಾರೆ, ಮುಂದಿನ ದಿನಗಳಲ್ಲಿ ಪಕ್ಷ ತೀರ್ಮಾನ ಮಾಡಿದಂತಾಗುತ್ತದೆ. ಬಹಳಷ್ಟು ಮಂದಿಗೆ ಸಚಿವರಾಗಲು ಆಸಕ್ತಿ ಇದೆ, ಆದರೆ ಅವಕಾಶ ಬರುವವರೆಗೆ ಕಾಯಬೇಕು ಅಷ್ಟೇ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next