ಮಂಗಳೂರು: ಫುಡ್ ಪಾಯ್ಸನ್ ನಿಂದಾಗಿ ಅಸ್ವಸ್ಥಗೊಂಡಿದ್ದ ನಗರದ ಹೊರವಲಯದಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಮವಾರ ಒಟ್ಟು 116 ಮಂದಿ ವಾಂತಿ ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮತ್ತೆ 13 ಮಂದಿ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ಜ್ವರದ ಲಕ್ಷಣ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಒಟ್ಟು 38 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳು ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಎಲ್ಲ ಬ್ರಾಹ್ಮಣರು ಒಂದೇ..; ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ತಿರುಗೇಟು
Related Articles
ಹಾಸ್ಟೆಲ್ ನಲ್ಲಿ ಒಟ್ಟು 782 ವಿದ್ಯಾರ್ಥಿಗಳಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಹಾಸ್ಟೆಲ್ ನಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಲಾಗಿದೆ.