ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಇದೇ ಸೆ. 9ಕ್ಕೆ ರಂದು ನಿಗದಿಪಡಿಸಲಾಗಿದೆ ಎಂದು ಆಯುಕ್ತರು ಮಂಗಳೂರು ಮಹಾನಗರ ಪಾಲಿಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 9ಕ್ಕೆ ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.
ಕಳೆದ ಮಾರ್ಚ್ 2 ರಂದು ನಿಗದಿಯಾಗಿದ್ದ ಮಹಾನಗರ ಪಾಲಿಕೆಯ 23 ನೇ ಅವಧಿಯ ಮೇಯರ್, ಉಪ ಮೇಯರ್ ಕೋರ್ಟ್ ಆದೇಶವೊಂದರ ಗೊಂದಲದ ಕಾರಣ ಮುಂದೂಡಿಕೆಯಾಗಿತ್ತು . ಹೀಗಾಗಿ , ಒಂದು ವರ್ಷದ ಅವಧಿ ಮುಗಿಸಿದ್ದ ಪ್ರೇಮಾನಂದ ಶೆಟ್ಟಿ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಈ ಅವಧಿಯ ಚುನಾವಣೆ ಇನ್ನೂ ನಡೆದಿಲ್ಲ.
ಇದನ್ನೂ ಓದಿ:ಲಂಡನ್‌ನಲ್ಲಿ ಗೋಪೂಜೆ ಮಾಡಿದ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ
ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ ಎರಡು ಸ್ಥಾನಗಳನ್ನು ಹೊಂದಿವೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿಯಲ್ಲಿ ಮೇಯರ್ ಸ್ಥಾನಕ್ಕೆ ಆಕಾಂಕ್ಷಿಗಳು ಇದ್ದಾರೆ. ಆದರೆ, ಮುಂಬರುವ ಸರಣಿ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟು ಪಕ್ಷ ಸಂಘಟನೆ, ಅನುಭವಕ್ಕೆ ಮನ್ನಣೆ ನೀಡಿ ಒಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.