Advertisement
ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಮಾತನಾಡಿ, ಮಂಗಳೂರು ವನ್ ಸಂಸ್ಥೆಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆ ಅನ್ವಯ ಕನಿಷ್ಠ ವೇತನ, ಇಎಸ್‌ಐ, ಪಿಎಫ್ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆಗೆ ಇಂಟಕ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿತ್ತು. ಈ ವೇಳೆ ಇಂಟಕ್ ನಿಯೋಗದ ಜತೆ ಆಗಮಿಸಿದ 6 ಮಂದಿಯನ್ನು ಕೆಲಸದಿಂದ ಕಿತ್ತುಹಾಕಲಾಗಿದೆ. ಮಹಿಳಾ ಕೆಲಸಗಾರರಿಗೆ ಸಂಸ್ಥೆ ದೌರ್ಜನ್ಯ ಎಸಗಿದೆ. ಪ್ರಸ್ತುತ 4 ಸಾವಿರದಿಂದ ಏಳು ಸಾವಿರ ರೂ. ವರೆಗೆ ಮಾತ್ರ ವೇತನ ನೀಡಲಾಗುತ್ತಿದೆ. ರಾಜ್ಯಾದ್ಯಂತ ಈ ಸಂಸ್ಥೆಯಲ್ಲಿ 2,000 ಮಂದಿ ಕೆಲಸ ನಿರ್ವಹಿಸುತ್ತಿದ್ದು, ಎಲ್ಲರಿಗೂ ಕಾರ್ಮಿಕ ಕಾನೂನು ಅನ್ವಯ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ನಗರಾಭಿವೃದ್ದಿ ಸಚಿವ ಯು.ಟಿ. ಖಾದರ್, ಕಾರ್ಮಿಕ ಮುಖಂಡರು ಹಾಗೂ ಮಂಗಳೂರು ವನ್ ಗುತ್ತಿಗೆ ಸಂಸ್ಥೆ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಪ್ರಕರಣದ ಬಗ್ಗೆ ಎರಡು ದಿನಗಳೊಳಗೆ ಜಿಲ್ಲಾಧಿಕಾರಿಯಿಂದ ವರದಿ ಪಡೆದು ಕಾರ್ಮಿಕ ಸಚಿವರು ಹಾಗೂ ಆಯುಕ್ತರ ಜತೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಆರು ಮಂದಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವ ಬಗ್ಗೆ ಕೂಡ ಪರಿಶೀಲಿಸಲಾಗು ವುದು. ತಪ್ಪೆಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಸರಕಾರ ಬದ್ಧ. ಈ ಬಗ್ಗೆ ಕಾರ್ಮಿಕ ಸಚಿವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
Related Articles
Advertisement
ಹೋರಾಟಸಚಿವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಮುಂದಿನ 15 ದಿನದೊಳಗೆ ಸರಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಮತ್ತೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ರಾಕೇಶ್ ಮಲ್ಲಿ ಹೇಳಿದರು. ಇಂಟಕ್ ಜಿಲ್ಲಾಧ್ಯಕ್ಷ ಮನೋಹರ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಸುರೇಶ್, ಜಿಲ್ಲಾ ಉಪಾಧ್ಯಕ್ಷ ಸ್ಟೀವನ್, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೇಖಾ, ಪುನೀತ್, ಉಮೇಶ್ ಕೋಟ್ಯಾನ್, ಶಶಿರಾಜ್ ಅಂಬಟ್ ಉಪಸ್ಥಿತರಿದ್ದರು.