Advertisement

ಮಂಗಳೂರು: ನಂದಿಗುಡ್ಡೆ ವೇಶ್ಯಾವಾಟಿಕೆ ಪ್ರಕರಣ; ಮತ್ತೊಬ್ಬನ ಬಂಧನ

11:44 AM Mar 22, 2022 | Team Udayavani |

ಮಂಗಳೂರು: ನಗರದ ನಂದಿಗುಡ್ಡೆಯ ಫ್ಲಾಟ್ ವೊಂದರಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಕರ ಹಾಗೂ ಮಹಿಳೆ ಹಾಗೂ ಯುವತಿಯರ ಮಾನವ ಕಳ್ಳ ಸಾಗಾಣಿಕೆ, ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.

Advertisement

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾದ ಅಬ್ದುಲ್ ರಾಝೀಕ್(44) ಉಳ್ಳಾಲ ಅಲಿಯಾಸ್ ರಫೀಕ್ ಉಳ್ಳಾಲನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರು ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು ಇಬ್ಬರು ಅಪ್ರಾಪ್ತ ಬಾಲಕಿಯವರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳನ್ನು ದಾಖಲಾಗಿರುತ್ತದೆ. ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 16 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next