ಮಂಗಳೂರು: ಮಾದಕ ದ್ರವ್ಯ ಸಾಗಾಣಿಕೆ ಆರೋಪದಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿಯ ಸ್ನೇಹಿತೆಯೋರ್ವಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಣಿಪುರ ಮೂಲದ ಈ ಯುವತಿಯನ್ನು ಪೊಲೀಸರು ಬಂಧಿಸುವಾಗ ನಶೆಯಲ್ಲಿ ತೇಲಾಡುತ್ತಿದ್ದಳು ಎನ್ನಲಾಗಿದೆ.
ನಗರದಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆಸ್ಕಾ ಎಂಬ ಯುವತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾನಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್, ಸೋಮವಾರ ಈಕೆಯನ್ನು ಬಂಧಿಸಲಾಗಿದ್ದು, ಆ ವೇಳೆ ಈಕೆ ಮಾತನಾಡುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಈಕೆಯ ವೈದ್ಯಕೀಯ ಪರೀಕ್ಷೆಯ ವೇಳೆಗೆ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: “ ಮಾಲು ಬೇಕು ಪ್ಲೀಸ್” ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು
ಡ್ಯಾನ್ಸರ್ ಕಿಶೋರ್ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಹೆಚ್ಚಿನ ವಿಚಾರಣೆ ಒಳಪಡಿಸಲಾಗುತ್ತಿದೆ. ಈತ ನೀಡಿದ ಮಾಹಿತಿಯ ಆಧಾರದಲ್ಲಿ ತನಿಖೆಯಾಗುತ್ತದೆ. ಇನ್ನೂ ಹಲವು ಸೆಲೆಬ್ರಿಟಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರದ ಬಗ್ಗೆ ಮೂಲಗಳ ಮಾಹಿತಿ ಇದೆ. ತನಿಖೆ ನಡೆಸಿ ಮುಂದಿನ ಹಂತಕ್ಕೆ ಹೋಗುತ್ತೇವೆ. ಈಗಾಗಲೇ ತನಿಖೆಗಾಗಿ ಮೂರು ತಂಡಗಳ ರಚನೆಯಾಗಿದೆ ಎಂದರು.
ಲಾಕ್ ಡೌನ್ ಸಂದರ್ಭದಲ್ಲಿ ಕಿಶೋರ್ ಶೆಟ್ಟಿ ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಯುವತಿ ಕೂಡ ಭಾಗವಹಿಸಿದ್ದಳು ಎಂಬ ಆರೋಪ ಕೇಳಿ ಬಂದಿದೆ.
ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಈ ಹಿಂದೆ ಹಿಂದಿ ಖಾಸಗಿ ವಾಹಿನಿಯ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ. ನಂತರ ಹಿಂದಿ ಚಿತ್ರದಲ್ಲೂ ನಟಿಸಿದ್ದ.