ಮಂಗಳೂರು: ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ರಾತ್ರಿ 9 ರಿಂದ ಡಿ.20ರ ರಾತ್ರಿ 12ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ. ಡಿಸಿಪಿಗಳು, ಇನ್ಸ್ಪೆಕ್ಟರ್ ಗಳ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ಕ್ಷಣ ಪ್ರತಿಭಟನೆ ಸಾಧ್ಯತೆಯಿರುವ ಕಾರಣ ಜಿಲ್ಲಾಧಿಕಾರಿ ಕಚೇರಿ ಎದುರು ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ನಗರದ ಪ್ರಮುಖ ರಸ್ತೆಗಳು, ಸರ್ಕಲ್ ಗಳು, ಡಿಸಿ ಕಚೇರಿಗೆ ಸಾಗುವ ದಾರಿ ಮಧ್ಯೆ ಬಂದೂಕು ಹಿಡಿದು ನಿಂತ ಪೊಲೀಸರನ್ನು ಗನ್ ಪಾಯಿಂಟ್ ಭದ್ರತೆಯಲ್ಲಿ ನಿಯೋಜಿಸಲಾಗಿದೆ. ಅನುಮತಿ ವಿನಹ: ಯಾವುದೇ ರೀತಿಯ ಪ್ರತಿಭಟನೆಗಳು ನಡೆಸಬಾರದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಖಡಕ್ ಸಂದೇಶವನ್ನು ಪ್ರತಿಭಟನಾಕಾರರಿಗೆ ನೀಡಿದ್ದಾರೆ.
ಮಂಗಳೂರು ನಗರದಲ್ಲಿ ಭದ್ರತೆ ಪರಿಶೀಲಿಸಿದ ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಮುಸ್ಲಿಂ ಧರ್ಮಗುರುಗಳನ್ನು ಸಂಪರ್ಕಿಸಿದ್ದೇವೆ, ಮುಸ್ಲಿಂ ಸೆಂಟ್ರಲ್ ಕಮಿಟಿ ಜೊತೆ ಮಾತನಾಡಿದ್ದೇವೆ. ಯಾವುದೇ ಪ್ರತಿಭಟನೆ ಮಾಡಲ್ಲ ಎಂದು ಭರವಸೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರು ಕೂಡಾ ಕಾನೂನು ಕೈಗೆತ್ತಿಗೊಳ್ಳದಂತೆ ಕಮಿಷನರ್ ಡಾ.ಪಿ.ಎಸ್.ಹರ್ಷ ಮನವಿ ಮಾಡಿದ್ದಾರೆ.