Advertisement

ಮಂಗಳೂರು: ಕಾನೂನು ಬದ್ದ ಪ್ರತಿಭಟನೆಗೆ ಅವಕಾಶ: ಡಾ.ಪಿ.ಎಸ್.ಹರ್ಷ

03:48 PM Dec 18, 2019 | Naveen |

ಮಂಗಳೂರು: ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರವಾಗಿ ಮಂಗಳೂರಲ್ಲಿ ಅನೇಕರು ಪ್ರತಿಭಟನೆಗೆ ಅವಕಾಶ ಕೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬದ್ದ ಪ್ರತಿಭಟನೆಗೆ ಅವಕಾಶ ಕೊಡುತ್ತೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿದರು.

Advertisement

ಅವರು ಮಂಗಳೂರಿನಲ್ಲಿ ಬುಧವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕೆಲವು ಸಂಘಟನೆಗಳು ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೇ ಏಕಾಏಕಿ ರಸ್ತೆ ತಡೆ ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿವುಂಟು ಮಾಡಿ ಈ ಮಸೂದೆಯ ವಿರುದ್ಧ ಆಕ್ಷೇಪಣೆಯನ್ನು ವ್ಯಕ್ತಪಡಿಸಿರುತ್ತಾರೆ. ಇದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಈಗಾಗಲೇ ಜರುಗಿಸಲಾಗಿದೆ. ಮುಂದೆಯೂ ಕೂಡಾ ಈ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದವರ ಮೇಲೆ ಕಠಿಣ ಕ್ರಮವನ್ನು ಇಲಾಖೆಯಿಂದ ತೆಗೆದುಕೊಳ್ಳಲಾಗುವುದು ಎಂದರು.

ಈ ಮಸೂದೆಯನ್ನು ವಿರೋಧಿಸಿ ಡಿ.20,, 23 ರಂದು ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಮಾಹಿತಿ ಪ್ರಚಾರಪಡಿಸುತ್ತಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಧಾರ್ಮಿಕ ಮುಖಂಡರನ್ನು ಕರೆಸಿ ಅವರೊಡನೆ ಚರ್ಚೆ ನಡೆಸಲಾಗಿದೆ. ಯಾವುದೇ ಬೃಹತ್ ಪ್ರತಿಭಟನೆಗಳಿಗೆ ಯಾವುದೇ ಧರ್ಮದ ಮುಖಂಡರು ತಮ್ಮ ಸಹಕಾರ ಹಾಗೂ ಬೆಂಬಲವಿರುವುದಿಲ್ಲವಾಗಿಯೂ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ತಮ್ಮ ಸಮುದಾಯದವರ ಸಂಪೂರ್ಣ ಬೆಂಬಲ ಹಾಗೂ ಸಹಕಾರ ಇರುವುದಾಗಿ ತಿಳಿಸಿರುತ್ತಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next