Advertisement

ಮಂಗಳೂರು: PFI ಪ್ರತಿಭಟನೆಯ ವೇಳೆ ಲಾಠಿ ಚಾರ್ಜ್‌; ಹಲವರಿಗೆ ಗಾಯ

11:30 AM Apr 04, 2017 | Team Udayavani |

ಮಂಗಳೂರು: ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ  ಕಾರ್ಯಕರ್ತರು ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಲಾಠಿ ಚಾರ್ಜ್‌ ನಡೆದ ಘಟನೆ ನಡೆದಿದೆ.

Advertisement

ಹಿಂದೂ ಪರ ಸಂಘಟನೆಯ ನಾಯಕರ ಹತ್ಯೆಗೆ ಸಂಬಂಧಿಸಿ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. 

ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ್ದಾರೆ.

ಲಾಠಿ ಏಟಿನಿಂದ ಹಲವರು ಗಾಯಗೊಂಡಿದ್ದು , ಓರ್ವ ಪಿಎಫ್ಐ ಕಾರ್ಯಕರ್ತನ ತಲೆಗೆ ಗಂಭೀರ ಗಾಯವಾಗಿ ತೀವ್ರ ಸ್ವರೂಪದಲ್ಲಿ ರಕ್ತಸ್ರಾವವಾಗಿದೆ. ಗಾಯಾಳುಗಳಿಗೆ  ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement

7 ಮಂದಿ ಪೊಲೀಸ್‌ ಸಿಬಂದಿಯೂ ಗಾಯಗೊಂಡಿರುವುದಾಗಿ ಆಯುಕ್ತ ಚಂದ್ರಶೇಖರ್‌ ಅವರು ತಿಳಿಸಿದ್ದಾರೆ. 

ಮುತ್ತಿಗೆ ಹಾಕಲು ಯತ್ನಿಸಿದ 60 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.  ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next