Advertisement

ಮಂಗಳೂರು: ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಆರೋಪ: ಪೊಲೀಸ್ ಮುಖ್ಯ ಪೇದೆ ಅಮಾನತು

12:31 PM Nov 02, 2019 | Team Udayavani |

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರಶಾಂತ್ ಶೆಟ್ಟಿಯವರು ಕೆಲವು ಅಕ್ರಮ ಚಟುವಟಿಕೆಗಳಲ್ಲಿ ಮತ್ತು ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಕಾರಣ ಈ ಕೂಡಲೇ ಅವರನ್ನು ಅಮಾನತ್ತಿನಲ್ಲಿರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ.

Advertisement

ಈ ಕುರಿತಂತೆ ಡಿಸಿಪಿ ಕಾನೂನು ಸುವ್ಯವಸ್ಥೆಯವರಿಗೆ ದೂರು ಸಹ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ಇಲಾಖಾ ವಿಚಾರಣೆಯನ್ನು ಸಹ ನಾವು ಮಾಡಲಿದ್ದೇವೆ. ವ್ಯಕ್ತಿ ಯಾರೇ ಆಗಿದ್ದರೂ, ಯಾವುದೇ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದು ಕಂಡು ಬಂದಲ್ಲಿ ಮಂಗಳೂರು ಪೊಲೀಸ್ ಆಯುಕ್ತಾಲಯದಿಂದ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next