ಮಂಗಳೂರು: ಪಾಲಿಕೆಯ ಸದಸ್ಯರೆಲ್ಲರೂ ಸೇರಿಕೊಂಡು, ಸಂಸದರು ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ನೂತನ ಮೇಯರ್ ಆಗಿ ಆಯ್ಕೆ ಯಾದ ಪ್ರೇಮಾನಂದ ಶೆಟ್ಟಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಆಶ್ವಾಸನೆಗಳನ್ನು ಈಡೇಸಲಾಗುವುದು ಎಂದು ಅವರು ಹೇಳಿದರು.
ಮಂಗಳಾದೇವಿ ವಾರ್ಡ್‌ನಿಂದ ಆಯ್ಕೆಯಾಗಿರುವ ಪ್ರೇಮಾನಂದ ಶೆಟ್ಟಿ, ಹಿರಿತನವನ್ನು ಪರಿಗಣಿಸಿ ಪಕ್ಷವು ಆಯ್ಕೆ ಮಾಡಿದೆ. ಅವರು 5 ನೇ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸುಮಂಗಲಾ ರಾವ್ ಅವರು ಕುಂಜತ್ತ್‌ಬೈಲ್ ದಕ್ಷಿಣ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಗಾಂಜಾ ಬಳಕೆ ತಡೆಗೆ ಕ್ರಮ: ಅಲೋಕ್ ಕುಮಾರ್
ಮೇಯರ್ ಸ್ಥಾನವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಉಪ ಮೇಯರ್ ಸ್ಥಾನವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ನೀಡುವ ಮೂಲಕ ಪಕ್ಷದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ.
ಇದನ್ನೂ ಓದಿ: ಮಂಗಳೂರು ಪಾಲಿಕೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆ