Advertisement

ಪಂಪ್ ವೆಲ್ ಮೇಲ್ಸೇತುವೆ ಜನವರಿ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ: ಸಂಸದ ನಳಿನ್

04:25 PM Nov 16, 2019 | Naveen |

ಮಂಗಳೂರು: ಡಿಸೆಂಬರ್ ಅಂತ್ಯಕ್ಕೆ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಜನವರಿ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆಗೆ ಶನಿವಾರದಂದು ಭೇಟಿ ನೀಡಿದ ಅವರು, ಪಂಪ್ ವೆಲ್ ಕಾಮಗಾರಿ ಈಗಾಗಲೇ ಪೂರ್ಣಗೊಳ್ಳಬೇಕಿತ್ತು. ಆದರೆ ಕೆಲವೊಂದು ಆಡಳಿತಾತ್ಮಕ, ಕಾನೂನಾತ್ಮಕ ತೊಂದರೆಗಳಿಂದ ಕಾಮಗಾರಿ ವಿಳಂಬವಾಯಿತು. ಜನವರಿ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಶಾಸಕ ಡಿ. ವೇದವ್ಯಾಸ ಕಾಮತ್, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಸೇರಿದಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರುಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next