Advertisement

ಮಂಗಳೂರು: ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ಚಾಲನೆ

11:58 AM Dec 04, 2017 | Team Udayavani |

ಮಂಗಳೂರು: ಮಂಗಳೂರು ಕಂಬಳ ಸಮಿತಿಯ ವತಿಯಿಂದ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ಆಯೋಜಿಸಿದ್ದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ರವಿವಾರ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್‌.ವಿನಯ ಹೆಗ್ಡೆ ಅವರು ಚಾಲನೆ ನೀಡಿದರು. 

Advertisement

ಬಳಿಕ ಮಾತನಾಡಿದ ಅವರು, ನಾಡಿನ ಪುರಾತನ ಸಂಸ್ಕೃತಿಯನ್ನು ಬಿಂಬಿಸುವ ಈ ಕಂಬಳ ಇದೇ ರೀತಿ ನೂರಾRಲ ನಡೆಯಬೇಕು. ಈ ಮೂಲಕ ಜಿಲ್ಲೆಯ ಜನತೆಗೆ ಕಂಬಳದ ಸೌಂದರ್ಯ ಲಭ್ಯವಾಗಲಿ ಎಂದು ಹಾರೈಸಿದರು. ಜೋಡುಕರೆಯನ್ನು ಉದ್ಘಾಟಿಸಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಕೆ. ಪ್ರಕಾಶ್‌ ಶೆಟ್ಟಿ ಮಾತನಾಡಿ, ನಮ್ಮ ಪೂರ್ವಜರು ಬಿಟ್ಟು ಹೋದ ಈ ಕಲೆ ಜಾತ್ರೆಯ ರೀತಿ ಆಚರಣೆಯಾಗಬೇಕು ಎಂದರು. 

ಶಾಸಕ ಜೆ.ಆರ್‌.ಲೋಬೊ ಮಾತ ನಾಡಿ, ನೆಲದ ಗ್ರಾಮೀಣ ಕ್ರೀಡೆ ಎನಿಸಿರುವ ಕಂಬಳಕ್ಕೆ ಕಾನೂನು ತೊಡಕು ಎದುರಾದಾಗ ಅದನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಸಮರ್ಥವಾಗಿ ನಿಭಾಯಿಸಿ ಮತ್ತೆ ಕಂಬಳಕ್ಕೆ ಅವಕಾಶ ಮಾಡಿಕೊಟ್ಟಿವೆ. ಇದೀಗ ಮಂಗಳೂರು ನಗರದಲ್ಲೇ ದೊಡ್ಡ ಮಟ್ಟದ ಕಂಬಳ ಆಯೋಜನೆ ಗೊಂಡಿರುವುದು ಅಭಿಮಾನದ ವಿಚಾರ ಎಂದರು. 

ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಮಾತನಾಡಿ, ತುಳುನಾಡಿನಲ್ಲಿ ಕೋಣಗಳನ್ನು ತರಬೇತುಗೊಳಿಸಿ ಈ ರೀತಿ ಕಂಬಳ ದೇಶದ ಯಾವುದೇ ಭಾಗದಲ್ಲೂ ಕಾಣಲು ಸಿಗುವುದಿಲ್ಲ. ಇದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡಬೇಕಿದೆ ಎಂದರು. 

ಕಂಬಳ ಸಮಿತಿಯ ಅಧ್ಯಕ್ಷ ಕ್ಯಾ| ಬೃಜೇಶ್‌ ಚೌಟ ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭಾ ಮಾಜಿ ಉಪಸಭಾಪತಿ ಯೋಗೀಶ್‌ ಭಟ್‌, ಮೇಯರ್‌ ಕವಿತಾ ಸನಿಲ್‌, ಸಮಿತಿ ಕಾರ್ಯಾಧ್ಯಕ್ಷ ನಿತಿನ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಪಿ.ಎಂ., ಗೌರವ ಸಲಹೆಗಾರರಾದ ಉಮಾನಾಥ ಕೋಟ್ಯಾನ್‌, ವಿಜಯ ಕುಮಾರ್‌ ಕಂಗಿನಮನೆ, ಸಮಿತಿಯ ಪದಾಧಿಕಾರಿಗಳು ಸಹಿತ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು. 

Advertisement

85 ಜತೆ  ಕೋಣಗಳು ಭಾಗಿ
ಮಂಗಳೂರು ಕಂಬಳದಲ್ಲಿ 6 ವಿಭಾಗಗಳಲ್ಲಿ ಒಟ್ಟು 85 ಜತೆ ಕೋಣಗಳು ಭಾಗವಹಿಸಿವೆ. ನೇಗಿಲು ಕಿರಿಯ ವಿಭಾಗದಲ್ಲಿ 26, ನೇಗಿಲು ಹಿರಿಯ ವಿಭಾಗದಲ್ಲಿ 25, ಹಗ್ಗ ಕಿರಿಯ ವಿಭಾಗದಲ್ಲಿ 12, ಹಗ್ಗ ಹಿರಿಯ ವಿಭಾಗದಲ್ಲಿ 14, ಅಡ್ಡ ಹಲಗೆಯಲ್ಲಿ 6, ಕನೆ ಹಲಗೆಯಲ್ಲಿ 2 ಜತೆ ಕೋಣಗಳು ಭಾಗವಹಿಸಿದ್ದವು. 

Advertisement

Udayavani is now on Telegram. Click here to join our channel and stay updated with the latest news.

Next