Advertisement

Mangalore: “ಮಂಗಳೂರು ರಥೋತ್ಸವ” ಸಂಪನ್ನ

11:17 PM Feb 16, 2024 | Team Udayavani |

ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ “ಮಂಗಳೂರು ರಥೋತ್ಸವ’ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಶುಕ್ರವಾರ ಜರಗಿತು.

Advertisement

ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕವು ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ದಿವ್ಯ ಹಸ್ತಗಳಿಂದ ನೆರವೇರಿತು.

ಯಜ್ಞಮಂಟಪದಲ್ಲಿ ಮಹಾಯಜ್ಞ, ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶ ಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು.

Advertisement

Udayavani is now on Telegram. Click here to join our channel and stay updated with the latest news.

Next