Advertisement

ಮಂಗಳೂರು: ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ

12:20 PM Nov 25, 2019 | Team Udayavani |

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪರಿಷ್ಕೃತ ರಾಷ್ಟ್ರೀಯ ಕ್ಷಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಇಂದಿನಿಂದ ಡಿ.12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದ್ದು, ಈ ಆಂದೋಲನದ ಮಂಗಳೂರಿನ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿಗಳ ಕಛೇರಿಯಲ್ಲಿ ಚಾಲನೆ ನೀಡಲಾಯಿತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ತುಳು ಚಲನಚಿತ್ರ ಕಲಾವಿದ ನವೀನ್ ಡಿ. ಪಡೀಲ್ ಅವರು ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಇಂದು ಸರ್ಕಾರವು ಅತ್ಯುತ್ತಮ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ರೋಗಿಗಳನ್ನು ಈ ವ್ಯವಸ್ಥೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಮೂಲಕ ಕ್ಷಯ ಮುಕ್ತ ಭಾರತಕ್ಕಾಗಿ ನೆರವಾಗಬೇಕು ಎಂದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ಡಾ.ರತ್ನಾಕರ್, ಡಾ. ಬದ್ರುದ್ದೀನ್, ಡಾ. ಬುಜಂಗ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next