Advertisement

ಮಂಗಳೂರು : ಕುಖ್ಯಾತ ಆರೋಪಿ ಆಕಾಶಭವನ ಶರಣ್ ಸೇರಿ ನಾಲ್ವರ ಸೆರೆ

12:58 PM Jan 14, 2022 | Team Udayavani |

ಮಂಗಳೂರು : ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಮತ್ತು ಆತನ ನಾಲ್ವರು ಸಹಚರರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಪ್ರಕರಣದ ವಿವರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ 08 ಡಿ.2021 ರಂದು ರಾತ್ರಿ ಸುಮಾರು 11. 30 ರ ವೇಳೆ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿ ಚಕ್ರ ವಾಹನದಲ್ಲಿ ಚೇಳಾರು ನಂದಿನಿ ಬ್ರೀಡ್ಜ್ ಪರಿಸರದಲ್ಲಿ ಹೋಗುತ್ತಿದ್ದ ಸಮಯ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಫೋನ್,3000 ರೂ ನಗದು ಹಾಗೂ ಕೆಎ-19-ಹೆಚ್ ಎ-3016 ನೇ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು. , ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಈ ಪ್ರಕರಣದಲ್ಲಿ ಭಾಗಿಯಾದ ಕಾವೂರು ನಿವಾಸಿ
ರೋಹಿದಾಸ್ ಅಲಿಯಾಸ್ ಶರಣ್ ಆಕಾಶಭವನ(38),ಕಂಕನಾಡಿಯ ಅನಿಲ್ ಕುಮಾರ್ ಸಾಲ್ಯಾನ್ (40), ಬಜ್ಪೆಯ ಸೈನಾಲ್ ಡಿ ಸೋಜಾ (22),
ಬಂಟ್ವಾಳ ಫರಂಗಿಪೇಟೆಯ ಪ್ರಸಾದ್(39), ಜೆಪ್ಪಿನಮೊಗರಿನ ಚೇತನ್ ಕೊಟ್ಟಾರಿ (35) ಎನ್ನುವವರನ್ನು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಆಕಾಶಭವನ ಶರಣ್ ಎಂಬಾತನು ಈ ಪ್ರಕರಣದ ಪ್ರಮುಖ ಸೂತ್ರದಾರಿಯಾಗಿದ್ದು, ಈತನು ಇತ್ತೀಚೆಗೆ ಜೈಲಿ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದು, ತನ್ನ ಸಹಚರರೊಂದಿಗೆ ಸೇರಿ ಈ ಕೃತ್ಯವನ್ನು ಎಸಗಿದ್ದಾನೆ.. ಈ ಕೃತ್ಯಕ್ಕೆ ಉಪಯೋಗಿಸಿದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ ಕಾರು, 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

Advertisement

ಆಕಾಶಭವನ ಶರಣ್ ತನ್ನ ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದಾಖಲಾದ ಸುಲಿಗೆ ಪ್ರಕರಣದಲ್ಲಿ ಸುಲಿಗೆ ಮಾಡಿದ ಮೊಬೈಲ್ ಫೋನ್ ನಿಂದ ಆಕಾಶಭವನ ಶರಣ್ ಬೆದರಿಕೆ ಹಾಕಿರುವ ಬಗ್ಗೆ ತಿಳಿದುಬಂದಿರುತ್ತದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next