ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯದ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದರೂ ಉದ್ಘಾಟನ ಭಾಗ್ಯ ಇನ್ನೂ ದೊರಕಿಲ್ಲ. ಹೀಗಾಗಿ, ಈ ಹಾಸ್ಟೆಲ್ ಲೆಕ್ಕಕ್ಕುಂಟು ಆಟಕ್ಕಿಲ್ಲ ಎಂಬ ಪರಿಸ್ಥಿತಿ ಇದೆ.
Advertisement
ಕ್ರೀಡಾ ಚಟುವಟಿಕೆಗಳಲ್ಲಿ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಹಿಂದುಳಿಯಬಾರದು ಎಂಬ ಉದ್ದೇಶಕ್ಕೆರಾಜ್ಯ ಸರಕಾರ 10 ಜಿಲ್ಲೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಕೆಲವು ವರ್ಷಗಳ ಹಿಂದೆ
ಮುಂದಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ವಸತಿ ನಿಲಯ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಪೂರ್ಣಗೊಂಡಿದೆ.
Related Articles
ಈಗಿರುವ ಹಳೆ ಕ್ರೀಡಾ ವಸತಿ ನಿಲಯದಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಒಟ್ಟು 50 ಮಂದಿ ವಿದ್ಯಾರ್ಥಿನಿಯರು ಇದ್ದಾರೆ. ಅದೇ ಕಟ್ಟಡದಲ್ಲಿ ಬಾಲಕರೂ ಇರುವುದರಿಂದ ಸರಕಾರದ ನಿಯಮದಂತೆ ಹೆಣ್ಮಕ್ಕಳಿಗೆ ಪ್ರತ್ಯೇಕ
ಹಾಸ್ಟೆಲ್ ನಿರ್ಮಿಸಲಾಗಿದೆ. ಹೊಸ ಕಟ್ಟಡ ಉದ್ಘಾಟನೆ ಬಳಿಕ ಹೆಣ್ಮಕ್ಕಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ.
Advertisement
ಲಾಲ್ಬಾಗ್ ಬಳಿ ನೂತನ ಕ್ರೀಡಾ ವಸತಿ ನಿಲಯದ ಕಾಮಗಾರಿ ಪೂರ್ಣಗೊಂಡಿದೆ. ಚುನಾವಣ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉದ್ಘಾಟನೆ ಮುಂದೂಡಲಾಗಿದ್ದು, ಸದ್ಯದಲ್ಲೇ ಉದ್ಘಾಟಿಸಿ, ವಿದ್ಯಾರ್ಥಿನಿಯರನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುತ್ತೇವೆ.-ಪ್ರದೀಪ್ ಡಿ’ಸೋಜಾ,
ಯುವ ಸಬಲೀಕರಣ ಮತ್ತು ಕ್ರೀಡಾ
ಇಲಾಖೆ ಸಹಾಯಕ ನಿರ್ದೇಶಕ